ಬ್ರೇಕಿಂಗ್ ನ್ಯೂಸ್: ಸಂಜನಾ ‘ಬಂಧ ಮುಕ್ತ’

287

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಡ್ರಗ್ಸ್ ಜಾಲಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದ ನಟಿ ಸಂಜನಾ ಗಲ್ರಾನಿಗೆ ಜಾಮೀನು ಸಿಕ್ಕಿದೆ. ಶುಕ್ರವಾರ ನಟಿಗೆ ಷರತ್ತು ಬದ್ಧ ಜಾಮೀನು ಸಿಕ್ಕಿದೆ.

3 ಲಕ್ಷ ರೂಪಾಯಿ ವೈಯಕ್ತಿಕ ಬಾಂಡ್, ಇಬ್ಬರ ಶ್ಯೂರಿಟಿ, ಪ್ರತಿ ತಿಂಗಳು ಎರಡು ಬಾರಿ ಠಾಣೆಗೆ ಹಾಜರಾಗಬೇಕು. ತನಿಖೆಗೆ ಸಹಕರಿಸಬೇಕು. ಅಲ್ದೇ ಸಾಕ್ಷಿಗಳನ್ನ ತಿರುಚದಂತೆ ಸೂಚಿಸಿದೆ. ಈ ಮೂಲಕ ನಟಿಗೆ ಷರತ್ತು ಬದ್ಧ ಜಾಮೀನು ನೀಡಲಾಗಿದೆ.

ಶುಕ್ರವಾರ ಸಂಜೆ ಅಥವ ಶನಿವಾರ ಬೆಳಗ್ಗೆ ಜೈಲಿಯಿಂದ ಹೊರ ಬರಲಿದ್ದಾರೆ. ಇನ್ನು ನಟಿ ರಾಗಿಣಿ ದ್ವಿವೇದಿ ಜೈಲಿನಲ್ಲಿದ್ದು, ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಕದ ತಟ್ಟಿದ್ದಾರೆ. ರಾಗಿಣಿಯ ಜಾಮೀನು ಭವಿಷ್ಯ ಏನಾಗುತ್ತೆ ಅನ್ನೋ ಕುತೂಹಲವಿದೆ.




Leave a Reply

Your email address will not be published. Required fields are marked *

error: Content is protected !!