ಪ್ರಜಾಸ್ತ್ರ ಸಿನಿಮಾ ಡೆಸ್ಕ್
ಸ್ಯಾಂಡಲ್ ವುಡ್ ಅಂಗಳದಲ್ಲಿ ಡ್ರಗ್ಸ್ ದಂಧೆಗೆ ಸಂಬಂಧಿಸಿದಂತೆ ಜೈಲು ಪಾಲಾಗಿರುವ ನಟಿ ರಾಗಿಣಿ ದ್ವಿವೇದಿಯ ಜಾಮೀನು ಅರ್ಜಿ ಮತ್ತೆ ಮುಂದೂಡಿಕೆಯಾಗಿದೆ. ಹೈಕೋರ್ಟ್ ಗೆ ಜಾಮೀನು ಸಲ್ಲಿಸಿದ ನಟಿಗೆ ಇದೀಗ ಮತ್ತೆ ಜೈಲು ವಾಸ ಫಿಕ್ಸ್ ಆಗಿದೆ.
ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಅಕ್ಟೋಬರ್ 23ಕ್ಕೆ ಅರ್ಜಿಯ ವಿಚಾರಣೆಯನ್ನ ಮುಂದೂಡಿಕೆ ಮಾಡಿದೆ. ಹೀಗಾಗಿ ನಟಿ ರಾಗಿಣಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಾಲ ಕಳೆಯಬೇಕಾಗಿದೆ.