ಪ್ರಜಾಸ್ತ್ರ ಸಿನಿಮಾ ಡೆಸ್ಕ್
ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಡ್ರಗ್ಸ್ ದಂಧೆ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಖ್ಯಾತ ನಿರೂಪಕಿ ಅನುಶ್ರೀಗೆ ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದಾರೆ. ನಿರೂಪಕ ಅಕುಲ್ ಬಾಲಾಜಿ ಬಳಿಕ ಇದೀಗ ನಿರೂಪಕಿ ಅನುಶ್ರೀಗೆ ನೋಟಿಸ್ ನೀಡಲಾಗಿದೆ.
ಈಗಾಗ್ಲೇ ಪೊಲೀಸರ ಬಲೆಗೆ ಬಿದ್ದಿರುವ ಕಿಶೋರ ಶೆಟ್ಟಿ ಅನುಶ್ರೀ ಹೆಸರು ಬಾಯಿ ಬಿಟ್ಟಿದ್ದಾನೆ ಎಂದು ಹೇಳಲಾಗ್ತಿದೆ. ಆರೋಪಿ ತರುಣ, ಅನುಶ್ರೀ ಜೊತೆ ಪಾರ್ಟಿ ಮಾಡಿರುವುದಾಗಿ ಹೇಳಿದ್ದ. ಇದೀಗ ಕಿಶೋರ ಶೆಟ್ಟಿ ಸಹ ಅನುಶ್ರೀ ಹೆಸರು ಬಾಯಿಬಿಟ್ಟಿದ್ದು, ಮಂಗಳೂರು ಪೊಲೀಸರು ನಿರೂಪಕಿ ಹಾಗೂ ನಟಿಯಾಗಿರುವ ಅನುಶ್ರೀಗೆ ನೋಟಿಸ್ ನೀಡಲಾಗಿದೆ.