ಬೆಳ್ಳಂಬೆಳಗ್ಗೆ ರಾಗಿಣಿ ಮನೆಗೆ ಸಿಸಿಬಿ ಟೀಂ ಎಂಟ್ರಿ

370

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಕೆಲ ನಟ, ನಟಿಯರು ಡ್ರಗ್ಸ್ ಪ್ರಕರಣದಲ್ಲಿ ತೊಡಗಿಸಿಕೊಂಡಿದ್ದಾರೆ ಅನ್ನೋ ಆರೋಪ ಕೇಳಿ ಬಂದಿದೆ. ಈ ಸಂಬಂಧ ಮೊದಲಿಗೆ ನಟಿ ರಾಗಿಣಿಗೆ ನೋಟಿಸ್ ನೀಡಲಾಗಿದೆ. ನಂತರ ಸಂಜನಾ, ಶರ್ಮಿಳಾ ಮಾಂಡ್ರೆ ಎಂದು ಹೇಳಲಾಗಿದೆ.

ಸಿಸಿಬಿ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗದ ನಟಿಯ ಮನೆಗೆ ಇಂದು ಬೆಳ್ಳಂಬೆಳಗ್ಗೆ ಸಿಸಿಬಿ ಪೊಲೀಸರು ಸರ್ಚ್ ವಾರೆಂಟ್ ನೊಂದಿಗೆ ಎಂಟ್ರಿ ಕೊಟ್ಟಿದ್ದಾರೆ. ರಾಗಿಣಿ ಆಪ್ತ ರವಿಶಂಕರ ವಶಕ್ಕೆ ಪಡೆದಿರುವ ಬೆನ್ನಲ್ಲೇ ಇದೀಗ ಯಲಹಂಕದಲ್ಲಿರುವ ಅವರ ಮನೆಯಲ್ಲಿ ಶೋಧಕಾರ್ಯ ನಡೆದಿದೆ. ಸಿಸಿಬಿ ಪೊಲೀಸರು ನಟಿ ರಾಗಿಣಿಯನ್ನ ವಿಚಾರಣೆ ನಡೆಸಲಾಗ್ತಿದೆ.

ಇನ್ನು ಈ ಪ್ರಕರಣದಲ್ಲಿ ಯಾವ ನಟರು ತೊಡಗಿಸಿಕೊಂಡಿದ್ದಾರೆ ಅನ್ನೋ ಮಾಹಿತಿ ಹೊರ ಬರಬೇಕಿದೆ. ಸಿಸಿಬಿ ಪೊಲೀಸರು ಅವರಿಗೆ ಏನಾದ್ರೂ ನೋಟಿಸ್ ಕೊಟ್ಟಿದ್ರೆ ತಿಳಿಸಬೇಕಿದೆ.




Leave a Reply

Your email address will not be published. Required fields are marked *

error: Content is protected !!