ಪ್ರಜಾಸ್ತ್ರ ಸಿನಿಮಾ ಡೆಸ್ಕ್
ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ವಿಚಾರಕ್ಕೆ ಸಂಬಂಧಿಸಿದಂತೆ ನಿರ್ದೇಶಕ ಇಂದ್ರಜೀತ ಲಂಕೇಶ ನೀಡಿರುವ 15 ಜನ ನಟ, ನಟಿಯರ ಲಿಸ್ಟ್ ಗೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ನೋಟಿಸ್ ನೀಡಲು ಸಿದ್ಧತೆ ನಡೆಸಿದ್ದಾರೆ ಎಂದು ಹೇಳಲಾಗ್ತಿದೆ.
ಸಿಸಿಬಿ ಕಚೇರಿಗೆ ಭೇಟಿ ನೀಡಿ ಸುಮಾರು 5 ಗಂಟೆಗಳ ಕಾಲ ಮಾಹಿತಿ ಹಂಚಿಕೊಂಡಿರುವ ನಿರ್ದೇಶಕ ಇಂದ್ರಜೀತ ಲಂಕೇಶ, ಸುಮಾರು 15 ಜನ ನಟ, ನಟಿಯರ ಲಿಸ್ಟ್ ಜೊತೆಗೆ ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನ ಸಹ ನೀಡಿದ್ದಾರೆ. ಈ ಸಂಬಂಧ ನೋಟಿಸ್ ನೀಡಲು ಸಿದ್ಧತೆ ನಡೆಸಿದ್ದು, ಇದಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಮೈಸೂರು ಭಾಗದ ಕಾಂಗ್ರೆಸ್ ಶಾಸಕ ಹಾಗೂ ಉತ್ತರ ಕರ್ನಾಟಕ ಭಾಗದ ಬಿಜೆಪಿ ಶಾಸಕರ ಪುತ್ರರ ಹೆಸರು ಕೇಳಿ ಬಂದಿದೆ.