ಸಂವಿಧಾನದ ಚಿಂತನೆ ಮೇಲೆ ಕಾಂಗ್ರೆಸ್ ನಿಂತಿದೆ: ಶಾಸಕ ಅಶೋಕ ಮನಗೂಳಿ

111

ಪ್ರಜಾಸ್ತ್ರ ಸುದ್ದಿ

ಸಿಂದಗಿ: ಕಾಂಗ್ರೆಸ್ ಪಕ್ಷವು ಅಂಬೇಡ್ಕರ್ ಅವರು ನೀಡಿದ ಸಂವಿಧಾನ, ಪ್ರಜಾಪ್ರಭುತ್ವದ ಚಿಂತನೆಗಳ ಮೇಲೆ ನಿಂತಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು. ಕರ್ನಾಟಕ ದಲಿತ ಸಂಘರ್ಷ ಸಮಿತಿ (ಡಾ.ಡಿ.ಜಿ ಸಾಗರ ಬಣ) ಕಾಂಗ್ರೆಸ್ಸಿಗೆ ಬೆಂಬಲ ಸೂಚಿಸಿ ‘ಸಂವಿಧಾನ, ಪ್ರಜಾಪ್ರಭುತ್ವ ವಿರೋಧಿ, ಕೋಮುವಾದಿ ಪಕ್ಷವನ್ನು ಧಿಕ್ಕರಿಸಿ ಜನ ಪರ ಚಿಂತನೆ ಹೊಂದಿದ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ’ ಅನ್ನೋ ಕರಪತ್ರ ಮಾಡಿದ್ದು, ಅದನ್ನು ಬಿಡುಗಡೆಗೊಳಿಸಿ ಮಾತನಾಡಿದರು.

ಪಟ್ಟಣದ ಕಾಂಗ್ರೆಸ್ ಕಾರ್ಯಾಲಯದಲ್ಲಿ ಮಂಗಳವಾರ ಕರಪತ್ರ ಬಿಡುಗಡೆಗೊಳಿಸಲಾಯಿತು. ಈ ಲೋಕಸಭಾ ಚುನಾವಣೆಯು ಕಾಂಗ್ರೆಸ್ ಹಾಗೂ ಬಿಜೆಪಿಯ ಮಧ್ಯೆದ ಚುಣಾವಣೆ ಅಲ್ಲ. ಧರ್ಮ-ಅಧರ್ಮದ ಮಧ್ಯದ ಚುನಾವಣೆ. ಪ್ರಜಾಪ್ರಭುತ್ವದ ಮೌಲ್ಯವನ್ನು ಎತ್ತಿ ಹಿಡಿಯಲು, ಸಂವಿಧಾನದ ಆಶಯ ಜಾರಿ ಮಾಡಲು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ನಮ್ಮ ಅಭ್ಯರ್ಥಿ ರಾಜು ಆಲಗೂರ ಅವರನ್ನು ಗೆಲ್ಲಿಸಿ ತರಬೇಕೆಂದು ಮನವಿ ಮಾಡಿದರು.

ದಸಂಸ ಜಿಲ್ಲಾ ಸಂಚಾಲಕ ವೈ ಸಿ ಮಯೂರ ಮಾತನಾಡಿ, ಸಿದ್ದರಾಮಯ್ಯ ಸರ್ಕಾರ ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ಗೌರವ ನೀಡುವ, ದುರ್ಬಲ, ಹಿಂದುಳಿದವರ ಮತ್ತು ಅಲ್ಪಸಂಖ್ಯಾತರ ಹಿತ ಕಾಪಾಡುತ್ತಿದೆ. ಸಂವಿಧಾನ, ಪ್ರಜಾಪ್ರಭುತ್ವ ವಿರೋಧಿ, ಕೋಮುವಾದಿ  ಪಕ್ಷಗಳನ್ನು ಧಿಕ್ಕರಿಸಿ ಜನಪರ ಚಿಂತನೆಯ  ಕಾಂಗ್ರೆಸ್ ಪಕ್ಷಕ್ಕೆ ಮತ ಚಲಾಯಿಸೋಣ ಎಂದರು.

ಈ ವೇಳೆ ದಸಂಸ ತಾಲೂಕು ಸಂಚಾಲಕ ಶರಣು ಚಲವಾದಿ, ಸಂಘಟನಾ  ಸಂಚಾಲಕ ನೀಲಕಂಠ ಹೂಸಮನಿ, ಸಂಘಟನೆಯ ಹಿರಿಯರಾದ ಅಪ್ಪಾರಾಯ ಬಟವಾಲ, ಪರಸು ಬ್ಯಾಕೋಡ, ಜೈ ಭೀಮ್ ತಳಕೇರಿ, ಶಿವುಕುಮಾರ ಗಣಿಹಾರ, ಸುನೀಲ ಸಂಗಟಾಣ, ಸುದೀರ ಬಟವಾಲ ಸೇರಿದಂತೆ ದಲಿತ ಸಂಘರ್ಷ ಸಮಿತಿಯ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.




Leave a Reply

Your email address will not be published. Required fields are marked *

error: Content is protected !!