ಡ್ರಗ್ಸ್ ಪಾರ್ಟಿ: ಶಾರೂಖ್ ಪುತ್ರನ ವಿಚಾರಣೆ

211

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ಮುಂಬೈ: ಬಾಲಿವುಡ್ ನಟ ಶಾರೂಖ್ ಖಾನ್ ಪುತ್ರನನ್ನು ಡ್ರಗ್ಸ್ ಪಾರ್ಟಿ ವಿಚಾರಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಐಷಾರಾಮಿ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ಪ್ರಕರಣಕ್ಕಾಗಿ ಶಾರೂಖ್ ಪುತ್ರ ಆರ್ಯನ್ ವಿಚಾರಣೆ ನಡೆಸಲಾಗುತ್ತಿದೆ.

ಆರ್ಯನ್ ಖಾನ್ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು. ಪಾರ್ಟಿಯಲ್ಲಿ ಡ್ರಗ್ಸ್ ಬಳಕೆಯಾಗುತ್ತಿದೆ ಎಂದು ಶನಿವಾರ ರಾತ್ರಿ ರಾಷ್ಟ್ರೀಯ ಮಾದಕ ವಸ್ತು ನಿಯಂತ್ರನ ಘಟಕದ ಅಧಿಕಾರಿಗಳಿಗೆ ಮಾಹಿತಿ ಬಂದಿದೆ. ಹೀಗಾಗಿ ಎನ್ ಸಿಬಿ ಅಧಿಕಾರಿಗಳ ಪ್ರಯಾಣಿಕರ ಕ್ರೂಸ್ ಹಡಗಿನ ಮೇಲೆ ದಾಳಿ ನಡೆಸಿದ್ದಾರೆ.

ಹಡಗಿನಲ್ಲಿ ಆರ್ಯನ್ ಕೂಡ ಇದ್ದ. ಕೆಲವು ಮಾದಕ ವಸ್ತುಗಳು ಪತ್ತೆಯಾಗಿವೆ. ಈ ಹಡಗು ಗೋವಾ ಕಡೆಗೆ ಹೊರಟಿತ್ತು. ಇದರಲ್ಲಿದ್ದ ಪ್ರಯಾಣಿಕರನ್ನು ಹೊರಗೆ ಬಿಡುತ್ತಿಲ್ಲ. 8-10 ಜನರ ವಿಚಾರಣೆ ನಡೆಸಲಾಗುತ್ತಿದೆ.




Leave a Reply

Your email address will not be published. Required fields are marked *

error: Content is protected !!