ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಇಡಿ ಅಧಿಕಾರಿಗಳ ಮುಂದೆ ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಜರಾಗಲಿದ್ದಾರೆ. ಹೀಗಾಗಿ ಭಾನುವಾರವೇ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.
ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಇಡಿ ನೋಟಿಸ್ ಜಾರಿ ಮಾಡಿದೆ. ಇದರಿಂದಾಗಿ ಮೈಸೂರಿನ ಕಾರ್ಯಕ್ರಮ ಮುಗಿಸಿಕೊಂಡು ದೆಹಲಿಗೆ ಪ್ರಯಾಣ ಬೆಳೆಸಿದರು. ಈ ವಿಚಾರ ಈಗಾಗ್ಲೇ ರಾಜಕೀಯ ಸ್ವರೂಪ ಪಡೆದಿದ್ದು, ಇದ್ಯಾವುದಕ್ಕೂ ನಾನು ಹೆದರವುದಿಲ್ಲವೆಂದು ಹೇಳಿದ್ದಾರೆ.