ಬಿಜೆಪಿ ನಾಟಕಗಳೆಲ್ಲ ಹಳೆತಾಗಿದೆ: ಸಿದ್ದರಾಮಯ್ಯ

257

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ನೆರೆ ಹಾವಳಿಯಿಂದ ಹಾನಿಗಿಡಾದ ಮಡಿಕೇರಿಯ ಪ್ರದೇಶಗಳಿಗೆ ಭೇಟಿ ನೀಡಿದ ವಿಪಕ್ಷ ನಾಯಕ ಸಿದ್ದರಾಮಯ್ಯನವರ ಕಾರಿನ ಮೇಲೆ ಮೊಟ್ಟೆ ಎಸೆದವನ ಬಂಧನವಾಗಿದೆ. ಈಗ ಇದು ಮತ್ತೊಂದು ಸ್ವರೂಪ ಪಡೆದಿದೆ. ಮೊಟ್ಟೆ ಎಸೆದವನು ಕಾಂಗ್ರೆಸ್ ಕಾರ್ಯಕರ್ತ ಎಂದು.

ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಬಿಜೆಪಿಯ ಇಂತಹ ನಾಟಕಗಳೆಲ್ಲ ಹಳತಾಗಿದೆ. ಮೊಟ್ಟೆ ಎಸೆದವ ಕಾಂಗ್ರೆಸ್ ಪಕ್ಷದವನಾಗಿದ್ದರೆ ಅವನನ್ನು ಮೊದಲು ಜೈಲಿಗೆ ಕಳಿಸಿ. ನಿಮಗ್ಯಾಕೆ ಅವನ ಹಿತರಕ್ಷಣೆಯ ಉಸಾಬರಿ ಎಂದಿದ್ದಾರೆ.

ಆಪರೇಷನ್ ಕಮಲ ಎಂದರೆ ಶಾಸಕರಿಗೆ ಮಾತ್ರ ಎಂದು ತಿಳಿದುಕೊಂಡಿದ್ದೆವು. ಈಗ ಬೀದಿ ಪುಂಡರ ಆಪರೇಷನ್ ಕಮಲ ಕೂಡಾ ಕರ್ನಾಟಕ ಬಿಜೆಪಿ ನಡೆಸುತ್ತಿದೆ ಎಂದು ಮಡಿಕೇರಿಯಲ್ಲಿ ಸಾಬೀತಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಅಲ್ಲದೇ ಆತ ಕಾಂಗ್ರೆಸ್ ಕಾರ್ಯಕರ್ತನಾಗಿದ್ದರೆ ಬಿಜೆಪಿ ಶಾಸಕ ಅಪ್ಪಚ್ಚು ರಂಜನ್ ರಾತ್ರೋರಾತ್ರಿ ಪೊಲೀಸ್ ಠಾಣೆಗೆ ಹೋಗಿ ಬಿಡಿಸಿಕೊಂಡು ಯಾಕೆ ಬರಬೇಕಾಗಿತ್ತು ಎಂದು ಪ್ರಶ್ನಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!