ಶಿವಮೊಗ್ಗದಲ್ಲಿ ಮುಂದುವರೆದ ನಿಷೇಧಾಜ್ಞೆ

187

ಪ್ರಜಾಸ್ತ್ರ ಸುದ್ದಿ

ಶಿವಮೊಗ್ಗ: ಈದ್ ಮಿಲಾದ್ ಮೆರವಣಿಗೆ ವೇಳೆ ನಗರದ ರಾಗಿಗುಡ್ಡದಲ್ಲಿ ನಡೆದ ಕಲ್ಲು ತೂರಾಟ ಘಟನೆ ಸಂಬಂಧ ಮಂಗಳವಾರವೂ ನಿಷೇಧಾಜ್ಞೆ ಮುಂದುವರೆದಿದೆ. ಪರಿಸ್ಥಿತಿ ನಿಯಂತ್ರಣದಲ್ಲಿದ್ದರೂ ಬೂದಿ ಮುಚ್ಚಿದ ಕೆಂಡದಂತಿದೆ ಎಂದು ಹೇಳಲಾಗುತ್ತಿದೆ.

ಮುಂದಿನ ಆದೇಶದ ತನಕ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ. ಇದಕ್ಕೆ ನಗರ ವರ್ತಕರು ಅಸಮಾಧಾನ ಹೊರ ಹಾಕಿದ್ದಾರೆ. ಇದರಿಂದಾಗಿ ವ್ಯಾಪಾರ ವಹಿವಾಟು ನಡೆಸಲು ಆಗದೆ ನಷ್ಟ ಅನುಭವಿಸುವ ಸ್ಥಿತಿ ನಿರ್ಮಾಣವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ಕಳೆದ ಭಾನುವಾರ ಗಾಂಧಿ ನಗರದ ಜಾಮೀಯಾ ಮಸೀದಿಯಿಂದ ಈದ್ ಮಿಲಾದ್ ಮೆರವಣಿಗೆ ಮಧ್ಯಾಹ್ನ 3 ಗಂಟೆಗೆ ಶುರುವಾಗಿದೆ. ರಾಗಿಗುಡ್ಡದಿಂದಲೂ ಮೆರವಣಿಗೆ ನಡೆಸಲು ಸಜ್ಜಾಗಿದ್ದರು. ಈ ವೇಳೆ ಕಲ್ಲು ತೂರಾಟ ನಡೆದು ಗಲಭೆ ಸೃಷ್ಟಿಯಾಗಿದೆ. ಹೀಗಾಗಿ ಎರಡು ಗುಂಪುಗಳ ನಡೆವೆ ಸಂಘರ್ಷ ಏರ್ಪಟ್ಟಿದೆ. ಹೀಗಾಗಿ ನಿಷೇಧಾಜ್ಞೆ ಹೇರಲಾಗಿದೆ.




Leave a Reply

Your email address will not be published. Required fields are marked *

error: Content is protected !!