15 ರಾಜ್ಯಗಳ ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ಘೋಷಣೆ

145

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಕೇಂದ್ರ ಚುನಾವಣಾ ಆಯೋಗ ದೇಶದ 15 ರಾಜ್ಯಗಳ ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ಘೋಷಣೆ ಮಾಡಿದೆ. ಫೆಬ್ರವರಿ 27ರಂದು ಚುನಾವಣೆಯಲಿದೆ. ಫೆಬ್ರವರಿ 15 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ.

ಕರ್ನಾಟಕದ ನಾಲ್ಕು ಸ್ಥಾನಗಳು ಸೇರಿದಂತೆ ಇತರೆ ರಾಜ್ಯಗಳ 56 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಉತ್ತರ ಪ್ರದೇಶ 10, ಬಿಹಾರ 6, ಮಹಾರಾಷ್ಟ್ರ 6, ಪಶ್ಚಿಮ ಬಂಗಾಳ 5, ಮಧ್ಯಪ್ರದೇಶ 5, ಕರ್ನಾಟಕ 4, ಗುಜರಾತ 4, ತೆಲಂಗಾಣ 3, ಆಂಧ್ರಾ 3, ರಾಜಸ್ಥಾನ 3, ಒಡಿಶಾ 3, ಛತ್ತೀಸಗಢ, ಹಿಮಾಚಲ ಪ್ರದೇಶ ಹಾಗೂ ಹರಿಯಾಣದ 1 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.




Leave a Reply

Your email address will not be published. Required fields are marked *

error: Content is protected !!