ಸಿಎಂ ಸರ್ಕಾರಿ ಕಾರ್ಯಕ್ರಮಗಳು ರದ್ದು

275

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯ ದಿನಾಂಕ ಘೋಷಣೆಯಾಗಿದೆ. ಮೇ 10ಕ್ಕೆ ಮತದಾನ, ಮೇ 13ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಿದೆ. ಹೀಗಾಗಿ ಮುಖ್ಯಮಂತ್ರಿ ಬೊಮ್ಮಾಯಿ ಅವರು ಈಗಾಗ್ಲೇ ನಿಗದಿಯಾಗಿದ್ದ ಸರ್ಕಾರಿ ಕಾರ್ಯಕ್ರಮಗಳನ್ನು ರದ್ದುಗೊಳಿಸಿದರು.

ಕೊಪ್ಪಳ ಹಾಗೂ ತವರು ಜಿಲ್ಲೆಯಾದ ಹಾವೇರಿಯ ಶಿಗ್ಗಾಂವಿ, ರಾಣೆಬೆನ್ನೂರಿನಲ್ಲಿ ನಡೆಯಬೇಕಿದ್ದ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ. ಇನ್ನು ಮುಂದೆ ಸಚಿವರಾಗಿ, ಶಾಸಕರಾಗಿ ಯಾವುದೇ ಸರ್ಕಾರಿ ಕಾರ್ಯಕ್ರಮಗಳನ್ನು ಮಾಡುವಂತಿಲ್ಲ. ಸರ್ಕಾರಿ ವಾಹನ ಬಳಸುವಂತಿಲ್ಲ. ಹೊಸ ಘೋಷಣೆಗಳನ್ನು ಮಾಡುವಂತಿಲ್ಲ.

ಈಗಾಗ್ಲೇ ಕಾಂಗ್ರೆಸ್ ಹಾಗೂ ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಏಪ್ರಿಲ್ ಮೊದಲ ವಾರದಲ್ಲಿ ಬಿಜೆಪಿ ತನ್ನ ಮೊದಲ ಪಟ್ಟಿ ಬಿಡುಗಡೆ ಮಾಡಲಾಗಿದೆ.




Leave a Reply

Your email address will not be published. Required fields are marked *

error: Content is protected !!