ಕರ್ನಾಟಕ ಬಿಜೆಪಿ ಹಂಚಿಕೊಂಡ ಪೋಸ್ಟ್ ತೆಗೆಯಲು ಎಕ್ಸ್ ಗೆ ಚು.ಆ ಆದೇಶ

74

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಮುಸ್ಲಿಂ ಮೀಸಲಾತಿ ವಿಚಾರ ಸಂಬಂಧ ಕರ್ನಾಟಕ ಬಿಜೆಪಿ ಘಟಕ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡ ಪೋಸ್ಟ್ ತಕ್ಷಣ ತೆಗೆಯುವಂತೆ ಚುನಾವಣಾ ಆಯೋಗ ಆದೇಶಿಸಿದೆ.

ಕರ್ನಾಟಕ ಬಿಜೆಪಿ ಘಟಕ ಮಾಡಿರುವ ಪೋಸ್ಟ್ ಪ್ರಸ್ತುತ ಚಾಲ್ತಿಯಲ್ಲಿರುವ ಕಾನೂನು ಚೌಕಟ್ಟನ್ನು ಉಲ್ಲಂಘಿಸುತ್ತದೆ. ಅದನ್ನು ತಕ್ಷಣವೇ ತೆಗೆದು ಹಾಕುವಂತೆ ಎಕ್ಸ್ ನೋಡಲ್ ಅಧಿಕಾರಿಗೆ ಆದೇಶ ಪತ್ರದಲ್ಲಿ ತಿಳಿಸಲಾಗಿದೆ. ಈ ಪ್ರಕರಣ ಸಂಬಂಧ ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಎಫ್ಐಆರ್ ದಾಖಲಿಸಿದ್ದಾರೆ.

ಮುಸ್ಲಿಂ ಹಾಗೂ ಎಸ್ಸಿ, ಎಸ್ಟಿ ಸಮುದಾಯಗಳ ನಡುವೆ ದ್ವೇಷ ಮೂಡಿಸುವ ಅನಿಮೇಟೆಡ್ ಕಾರ್ಟೂನ್ ವಿಡಿಯೋ ತೆಗೆದು ಹಾಕಬೇಕು ಹಾಗೂ ದೂರ ದಾಖಲಿಸಿಕೊಳ್ಳಬೇಕು ಎಂದು ಬಿಜೆಪಿ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು ಸಲ್ಲಿಸಿತ್ತು.




Leave a Reply

Your email address will not be published. Required fields are marked *

error: Content is protected !!