ವಿದ್ಯುತ್ ತಗುಲಿ ಯುವಕ ಸಾವು

244

ಪ್ರಜಾಸ್ತ್ರ ಸುದ್ದಿ

ಗದಗ: ನೀರಿನ ಪಂಪ್ ಸೆಟ್ ಆನ್ ಮಾಡಲು ಹೋದಾಗ ವಿದ್ಯುತ್ ತಗುಲಿ ಯುವಕನೊಬ್ಬ ಮೃತಪಟ್ಟ ಘಟನೆ ಲಕ್ಷ್ಮೇಶ್ವರ ತಾಲೂಕಿನ ಹುಲ್ಲೂರು ಗ್ರಾಮದಲ್ಲಿ ನಡೆದಿದೆ. ಈಶ್ವರ ಬಸಪ್ಪ ಕುರಿ(22) ಮೃತ ಯುವಕ ಎಂದು ತಿಳಿದು ಬಂದಿದೆ.

ಮನೆಯಲ್ಲಿ ಮೋಟರ್ ಸ್ವಿಚ್ ಹಾಕುವ ಸಂದರ್ಭದಲ್ಲಿ ವಿದ್ಯುತ್ ಶಾಕ್ ಹೊಡದಿದೆ. ಇದರ ಪರಿಣಾಮ ಈಶ್ವರ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಮಗನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಲಕ್ಷ್ಮೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.




Leave a Reply

Your email address will not be published. Required fields are marked *

error: Content is protected !!