ಶಾರ್ಟ್ ಸರ್ಕ್ಯೂಟ್: ಚಿಕ್ಕಸಿಂದಗಿಯಲ್ಲಿ ಸ್ಫೋಟಗೊಂಡ ಟಿಸಿ

397

ಪ್ರಜಾಸ್ತ್ರ ಸುದ್ದಿ

ಸಿಂದಗಿ: ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿನ ವಿದ್ಯುತ್ ಟಿಸಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಹತ್ತಿರದಲ್ಲಿರುವ ಟಿಸಿ ಹೊತ್ತಿ ಉರಿದಿದೆ.

ಟಿಸಿಯಲ್ಲಿ ಅಪಾರ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ, ಗ್ರಾಮಸ್ಥರು ಕೆಲ ಕಾಲ ಆತಂಕಕ್ಕೆ ಒಳಗಾಗಿದ್ರು. ಬೆಂಕಿ ಕಾಣಿಸಿಕೊಂಡ್ಮೇಲೆ ಟಿಸಿ ಸ್ಫೋಟಗೊಂಡಿದೆ. ಟಿಸಿ ಬೇರೆಡೆಗೆ ಸ್ಥಳಾಂತರಿಸಲು ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿದರೂ ಹೆಸ್ಕಾಂ ಅಧಿಕಾರಿಗಳು ಕ್ಯಾರೆ ಎನ್ನುತ್ತಿಲ್ಲವೆಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಾಲೆ ಪಕ್ಕದಲ್ಲಿ ಟಿಸಿ ಇದ್ದು, ಹತ್ತಿರದಲ್ಲಿ ಮನೆಗಳು ಸಹ ಇವೆ. ಇದ್ರಿಂದ ಏನಾದ್ರು ಅನಾಹುತ ಸಂಭವಿಸಿದ್ರೆ ಯಾರು ಹೊಣೆ ಅನ್ನೋ ಪ್ರಶ್ನೆ ಮೂಡಿದೆ. ಸಂಬಂಧಿಸಿದ ಅಧಿಕಾರಿಗಳು ಕೂಡಲೇ ಸೂಕ್ತ ಕ್ರಮ ತೆಗೆದುಕೊಳ್ಳಬೇಕಿದೆ.




Leave a Reply

Your email address will not be published. Required fields are marked *

error: Content is protected !!