ಭೈರವಾಡಗಿಯಲ್ಲಿ ವಿದ್ಯುತ್ ತಗುಲಿ ಮಹಿಳೆ ಸಾವು

267

ಪ್ರಜಾಸ್ತ್ರ ಸುದ್ದಿ

ದೇವರಹಿಪ್ಪರಗಿ: ವಿದ್ಯುತ್ ತಗುಲಿ ಮಹಿಳೆ ಸಾವನ್ನಪ್ಪಿದ ಘಟನೆ ತಾಲೂಕಿನ ಭೈರವಾಡಗಿ ಗ್ರಾಮದಲ್ಲಿ ನಡೆದಿದೆ. 48 ವರ್ಷದ ಮಡಿವಾಳವ್ವ ಶಿವಪ್ಪ ನಡಕೂರ ಅನ್ನೋ ಮಹಿಳೆ ಮೃತ ದುರ್ದೈವಿ.

ಕಳೆದ ಎರಡು ದಿನಗಳಿಂದ ಸುರಿದ ಮಳೆಯಿಂದಾಗಿ ಮನೆ ಸಂಪೂರ್ಣವಾಗಿ ತೇವದಿಂದ ಕೂಡಿದೆ. ಅಲ್ದೇ, ವಿದ್ಯುತ್ ತಂತಿ ತುಂಡಾಗಿ ಬಿದ್ದಿದೆ. ಇದ್ರಿಂದಾಗಿ ಬಾಗಿಲಿನ ಚೀಲಕದ ಮೂಲಕ ವಿದ್ಯುತ್ ಪ್ರವಹಿಸಿ ಮಹಿಳೆ ಸಾವನ್ನಪ್ಪಿದ್ದಾಳೆ ಎಂದು ಹೇಳಲಾಗ್ತಿದೆ. ಬಸವನ ಬಾಗೇವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.




Leave a Reply

Your email address will not be published. Required fields are marked *

error: Content is protected !!