ತುರ್ತು ಸರ್ವಪಕ್ಷ ಸಭೆಯಲ್ಲಿ ಏನೆಲ್ಲಾ ಚರ್ಚೆ ಗೊತ್ತಾ?

141

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ತುರ್ತು ಸರ್ವಪಕ್ಷ ಸಭೆಯನ್ನು ಬುಧವಾರ ನಡೆಸಲಾಯಿತು. ಈ ವೇಳೆ ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರ ಸೇರಿದಂತೆ ಹಲವು ವಿಷಯಗಳ ಚರ್ಚೆ ನಡೆಸಲಾಯಿತು.

ಆದೇಶದ ಪ್ರಕಾರ 99 ಟಿಎಂಸಿ ನೀರು ಬಿಡಬೇಕಿತ್ತು. 37 ಟಿಎಂಸಿ ನೀರು ಬಿಡಲಾಗಿದೆ. ನಮ್ಮಲ್ಲಿ ಸಂಗ್ರಹ ಇರುವುದೇ 53 ಟಿಎಂಸಿ ನೀರು. ಆದರೂ ನಿತ್ಯ 5 ಟಿಎಂಸಿ ನೀರು ಬಿಡಬೇಕು ಎಂದು ಹೇಳಿದ್ದಾರೆ. ರಾಜ್ಯದ ರೈತರನ್ನು ಕಡೆಗಣಿಸಿ ನೀರು ಬಿಡಬೇಕು ಎಂದು ಯಾರೂ ಹೇಳಿಲ್ಲ ಎಂದು ಸಿಎಂ ಹೇಳಿದರು.

ಈ ಕುರಿತು ನಮ್ಮ ಹತ್ತಿರ ಎರಡು ಹಾದಿಗಳು. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಿಕ್ಕೆ ಮತ್ತೆ ಅರ್ಜಿ ಹಾಕುವುದು. ಮತ್ತೊಂದು ನಮ್ಮಲ್ಲಿ ನೀರು ಇಲ್ಲವೆಂದು ಸುಪ್ರೀಂ ಕೋರ್ಟ್ ಮೆಟ್ಟಿಲು ಹತ್ತುವುದು. ಈ ಸಂಬಂಧ ಜಲಸಂಪನ್ಮೂಲ ಸಚಿವರು ದೆಹಲಿಗೆ ತೆರಳಿ ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿಯಾಗಲಿದ್ದಾರೆ. ಈ ಸಮಸ್ಯೆಗೆ ಮೇಕೆದಾಟು ಯೋಜನೆ ಒಂದೇ ಪರಿಹಾರ ಎನ್ನಲಾಯಿತು.




Leave a Reply

Your email address will not be published. Required fields are marked *

error: Content is protected !!