ಇನ್ಮುಂದೆ ಪ್ರತಿ ಭಾನುವಾರ ಸಂಪೂರ್ಣ ಲಾಕ್ ಡೌನ್

356

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಕರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇನ್ಮುಂದೆ ಕಟ್ಟುನಿಟ್ಟಿನ ಕ್ರಮಕ್ಕೆ ರಾಜ್ಯ ಸರ್ಕಾರ ನಿರ್ಧರಿಸಿದೆ. ಜುಲೈ 5 ರಿಂದ ಪ್ರತಿ ಭಾನುವಾರ ಸಂಪೂರ್ಣ ಲಾಕ್ ಡೌನ್ ಎಂದು ಕಂದಾಯ ಸಚಿವ ಆರ್.ಅಶೋಕ ಹೇಳಿದ್ದಾರೆ. ಮುಂದಿನ ಆದೇಶದವರೆಗೂ ಪ್ರತಿ ಭಾನುವಾರ ಲಾಕ್ ಡೌನ್ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಹೆಚ್ಚುತ್ತಿರುವ ಸೋಂಕು ಹಿನ್ನೆಲೆಯಲ್ಲಿ ಸಿಎಂ ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಸಭೆ ಕರೆಯಲಾಗಿತ್ತು. ಈ ವೇಳೆ, ರಾಜ್ಯದಲ್ಲಿ ಇನ್ನಷ್ಟು ಕಟ್ಟುನಿಟ್ಟಿನ ಕ್ರಮಗಳನ್ನ ತೆಗೆದುಕೊಳ್ಳಲು ನಿರ್ಧರಿಸಲಾಗಿದೆ. ಈಗಾಗ್ಲೇ ಇರುವ 2ನೇ ಹಾಗೂ 4ನೇ ಶನಿವಾರದ ರಜೆಯನ್ನ, ಜುಲೈ 10ರಿಂದು ಒಂದು ತಿಂಗಳ ಕಾಲ ಎಲ್ಲ ಶನಿವಾರದಂದು ಸರ್ಕಾರಿ ಹಾಗೂ ಸರ್ಕಾರಿ ಸ್ವಾಮ್ಯಕ್ಕೆ ಒಳಪಡುವ ಕಚೇರಿಯನ್ನ ರಜೆಗೆ ತೀರ್ಮಾನಿಸಲಾಗಿದೆ.

ಇನ್ನು ಇಷ್ಟು ದಿನ ರಾತ್ರಿ 9ರಿಂದ ಬೆಳಗ್ಗೆ 5ಗಂಟೆವರೆಗೆ ಇರುವ ಕರ್ಫ್ಯೂ ಅವಧಿಯನ್ನ ರಾತ್ರಿ 8ಗಂಟೆಯಿಂದ ಬೆಳಗ್ಗೆ 5ಗಂಟೆ ವರೆಗೂ ಮಾಡಲು ನಿರ್ಧರಿಸಲಾಗಿದೆ. ಇನ್ನು ಮಾರುಕಟ್ಟೆಯಲ್ಲಿ ಜನದಟ್ಟಣೆ ತಡೆಯಲು ನಿರ್ಧಾರ. ಕೋವಿಡ್ 19ನಿಂದ ಮೃತಪಟ್ಟವರಿಗಾಗಿ ಪ್ರತ್ಯೇಕ ಆಂಬ್ಯುಲೆನ್ಸ್ ವ್ಯವಸ್ಥೆ ಸೇರಿದಂತೆ ಹಲವು ಮಹತ್ವದ ನಿರ್ಧಾರಗಳನ್ನ ತೆಗೆದುಕೊಳ್ಳಲಾಗಿದೆ.




Leave a Reply

Your email address will not be published. Required fields are marked *

error: Content is protected !!