ದಾಖಲೆ ಸಲ್ಲಿಕೆಗೆ ಅವಕಾಶ ಕೇಳಿದ ಪರಂ

349

ಬೆಂಗಳೂರು: ಮಾಜಿ ಡಿಸಿಎಂ ಡಾ.ಜಿ ಪರಮೇಶ್ವರ ಇಂದು ಐಟಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾದ್ರು. ಈ ವೇಳೆ ಅವರು ದಾಖಲೆ ಸಲ್ಲಿಕೆಗೆ ಮೂರು ದಿನಗಳ ಕಾಲಾವಕಾಶ ಬೇಕೆಂದು ಮನವಿ ಮಾಡಿಕೊಂಡಿದ್ದಾರೆ. ಅದಕ್ಕೆ ಐಟಿ ಅಧಿಕಾರಿಗಳು ಒಪ್ಪಿಗೆ ನೀಡಿದ್ದಾರೆ.

ಮಾಜಿ ಡಿಸಿಎಂ ಜಿ.ಪರಮೇಶ್ವರ ಹಾಗೂ ಮಾಜಿ ಸಚಿವ ಜಾಲಪ್ಪ ಅವರಿಗೆ ಸೇರಿದ ಶಿಕ್ಷಣ ಸಂಸ್ಥೆಗಳು, ಮನೆ ಸೇರಿದಂತೆ ಹಲವು ಕಡೆ ದಾಳಿ ನಡೆಸಿದ್ರು. ಇದಕ್ಕೆ ಸಂಬಂಧಿಸಿದಂತೆ ಪರಮೇಶ್ವರ ಅವರಿಗೆ ಇಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ರು. ಈ ಹಿನ್ನೆಲೆಯಲ್ಲಿ ಪರಮೇಶ್ವರ ಹಾಜರಾಗಿದ್ರು.




Leave a Reply

Your email address will not be published. Required fields are marked *

error: Content is protected !!