ಸವದಿ ದುಡುಕಿನ ನಿರ್ಧಾರ ತೆಗೆದುಕೊಳ್ಳಬಾರದು: ಸಿಎಂ ಬೊಮ್ಮಾಯಿ

221

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕಳೆದ ರಾತ್ರಿ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದೆ. ಇದರಲ್ಲಿ ಅನೇಕ ಹಿರಿಯರಿಗೆ ಹೊರಗೆ ಇಡಲಾಗಿದೆ. ಅನೇಕರಿಗೆ ಹೊಸ ಕ್ಷೇತ್ರ ಘೋಷಿಸಿ ಅಚ್ಚರಿ ಮೂಡಿಸಲಾಗಿದೆ. ಇನ್ನು ಟಿಕೆಟ್ ವಂಚಿತರಲ್ಲಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಸಹ ಒಬ್ಬರು. ಹೀಗಾಗಿ ಅವರು ಬಿಜೆಪಿಯಿಂದ ದೂರ ಸರಿಯಲು ನಿರ್ಧರಿಸಿದ್ದಾರೆ.

ಈ ಕುರಿತು ಮಾತನಾಡಿರುವ ಸಿಎಂ ಬೊಮ್ಮಾಯಿ, ಸವದಿ ದುಡುಕಿನ ನಿರ್ಧಾರ ತೆಗೆದುಕೊಳ್ಳಬಾರದು. ನಾನು ಅವರೊಂದಿಗೆ ಮಾತನಾಡುತ್ತೇನೆ ಎಂದಿದ್ದಾರೆ. ಆದರೆ, ಸವದಿ ಈಗಾಗ್ಲೇ ಬಿಜೆಪಿ ಬಿಡುವ ಕುರಿತು ಬಹಿರಂಗ ಸಭೆಯಲ್ಲಿ ಹೇಳಿದ್ದಾರೆ. ಬೇರೆ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಿಸಿಕೊಂಡು ಬರುವ ಶಕ್ತಿ ಇರುವ ಸವದಿಗೆ ತವರು ಜಿಲ್ಲೆಯಲ್ಲಿಯೇ ಸ್ಪರ್ಧಿಸಲು ಅವಕಾಶ ನೀಡಿಲ್ಲ. ಕ್ಷೇತ್ರದ ಜನರ ಜೊತೆಗೆ ಚರ್ಚಿಸಿ ಮುಂದಿನ ನಿರ್ಧಾರ ಮಾಡುತ್ತೇನೆ ಎಂದಿರುವುದು ಬಿಜೆಪಿಯಲ್ಲಿ ಹೊಸ ಟೆನ್ಷನ್ ಶುರುವಾಗಿದೆ.




Leave a Reply

Your email address will not be published. Required fields are marked *

error: Content is protected !!