ಆಪ್ ಸೇರಿದ ಮಾಜಿ ಐಪಿಎಸ್ ಅಧಿಕಾರಿ

437

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಕರ್ನಾಟಕದ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಇಂದು ಆಪ್ ಪಕ್ಷ ಸೇರ್ಪಡೆಯಾಗಿದ್ದಾರೆ. ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನೇತೃತ್ವದಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಈ ವೇಳೆ ದೆಹಲಿ ಡಿಸಿಎಂ ಮನೀಷ್ ಸಿಸೋಡಿಯಾ, ಆಪ್ ನ ಕರ್ನಾಟಕ ಸಂಚಾಲಕ ಪೃಥ್ವಿ ರೆಡ್ಡಿ ಅವರ ಸಮ್ಮುಖದಲ್ಲಿ ಭಾಸ್ಕರ್ ರಾವ್ ಆಪ್ ಗೆ ಸೇರ್ಪಡೆಯಾಗುವ ಮೂಲಕ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದಾರೆ.

1990ರ ಬ್ಯಾಚಿನ್ ಐಪಿಎಸ್ ಅಧಿಕಾರಿಯಾಗಿರುವ ಭಾಸ್ಕರ್ ರಾವ್, ರೈಲ್ವೆ ಪೊಲೀಸ್ ಇಲಾಖೆಯ ಎಡಿಜಿಪಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಸಂದರ್ಭದಲ್ಲೇ ಕಳೆದ ವರ್ಷ ಸ್ವಯಂ ನಿವೃತ್ತಿಗೆ ಅರ್ಜಿ ಸಲ್ಲಿಸಿದ್ದರು. ಸರ್ಕಾರ ಅವರ ಅರ್ಜಿಯನ್ನು ಅಂಗೀಕರಿಸಿದೆ. ಹೀಗಾಗಿ ಇಂದು ಆಪ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು.




Leave a Reply

Your email address will not be published. Required fields are marked *

error: Content is protected !!