ಮಾಜಿ ಸಚಿವ ಜಿ.ರಾಮಕೃಷ್ಣ ನಿಧನ

319

ಪ್ರಜಾಸ್ತ್ರ ಸುದ್ದಿ

ಕಲಬುರಗಿ: ಕಾಂಗ್ರೆಸ್ ಮಾಜಿ ಸಚಿವ 84 ವರ್ಷದ ಜಿ.ರಾಮಕೃಷ್ಣ ಇಂದು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಇವರು, ಪ್ರಶಾಂತ ನಗರದಲ್ಲಿರುವ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಕಲಬುರಗಿ ಗ್ರಾಮೀಣ ಹಾಗೂ ಕಮಲಾಪುರ ಕ್ಷೇತ್ರದಿಂದ ಪ್ರತಿನಿಧಿಸಿದ್ದ ಇವರು ನಾಲ್ಕು ಬಾರಿ ಶಾಸಕರಾಗಿದ್ರು. ರಾಮಕೃಷ್ಣ ಹೆಗಡೆ ಅವರ ಸರ್ಕಾರದಲ್ಲಿ ವೈದ್ಯಕೀಯ ಶಿಕ್ಷಣ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಮಾಜಿ ಸಚಿವರ ನಿಧನಕ್ಕೆ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!