ಆಶ್ರಯ ಮನೆಗಳ ಹರಿಕಾರ ಎಸ್.ಆರ್ ಮೋರೆ ನಿಧನ

201

ಪ್ರಜಾಸ್ತ್ರ ಸುದ್ದಿ

ಧಾರವಾಡ: ವಯೋಸಹಜ ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಎಸ್.ಆರ್ ಮೋರೆ(82) ಗುರುವಾರ ನಿಧನ ಹೊಂದಿದ್ದಾರೆ. ನಗರದ ಎಸ್ ಡಿಎಂ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ದುರಂತವೆಂದರೆ ಇಂದು ಅವರ ಜನ್ಮ ದಿನ. ಜನ್ಮ ದಿನವೇ ನಿಧನ ಹೊಂದಿದ್ದಾರೆ. ನಾಲ್ಕು ಬಾರಿ ಶಾಸಕರಾಗಿದ್ದ ಎಸ್.ಆರ್ ಮೋರೆ, ಬಂಗಾರಪ್ಪ ಸರ್ಕಾರದಲ್ಲಿ ಸಹಕಾರ ಸಚಿವರಾಗಿದ್ದರು. ಧರ್ಮಸಿಂಗ್ ಸರ್ಕಾರದಲ್ಲಿ ಪೌರಾಡಳಿತ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.

ಆಶ್ರಯ ಮನೆಗಳ ಹರಿಕಾರ ಎಂದೇ ಭಾಗದಲ್ಲಿ ಖ್ಯಾತಿಯನ್ನು ಗಳಿಸಿದ್ದರು. ಜೊತೆಗೆ ಹುಬ್ಬಳ್ಳಿ-ಧಾರವಾಡ ಭಾಗದಲ್ಲಿ ಕುಡಿಯುವ ನೀರಿನ ಸೌಲಭ್ಯ ಒದಗಿಸುವಲ್ಲಿ ಸಾಕಷ್ಟು ಶ್ರಮಿಸಿದ್ದಾರೆ. ಇಂದು ಸಂಜೆ ಸುಮಾರು 5.30ರ ಸಮಯದಲ್ಲಿ ಮೋರೆ ಫಾರ್ಮ್ ಹೌಸ್ ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಹೇಳಲಾಗುತ್ತಿದೆ.




Leave a Reply

Your email address will not be published. Required fields are marked *

error: Content is protected !!