ಅಥಣಿ ಬಳಿ ಮಾಜಿ ಶಾಸಕರ ಕಾರು ಅಪಘಾತ

143

ಪ್ರಜಾಸ್ತ್ರ ಸುದ್ದಿ

ಬೆಳಗಾವಿ: ಮಾಜಿ ಶಾಸಕ ಕಲ್ಲಪ್ಪ ಮಗೆಣ್ಣನವರ ಹಾಗೂ ಇತರರು ಪ್ರಯಾಣಿಸುತ್ತಿದ್ದ ಕಾರು ಅಥಣಿ ಪಟ್ಟಣದ ಹೊರವಲಯದಲ್ಲಿ ಕಳೆದ ರಾತ್ರಿ ಅಪಘಾತಕ್ಕಿಡಾಗಿದೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದು, ಸಣ್ಣಪುಟ್ಟ ಗಾಯಗಳಾಗಿವೆ.

ವಿಜಯಪುರದಿಂದ ಚಿಕ್ಕೋಡಿ ತಾಲೂಕಿನ ಸ್ವಗ್ರಾಮ ಮಾಂಜರಿಗೆ ತೆರಳುತ್ತಿದ್ದ ವೇಳೆ ಅಥಣಿಯಿಂದ ವಿಜಯಪುರಕ್ಕೆ ತೆರಳುತ್ತಿದ್ದ ಲಾರಿಯ ಟೈರ್ ಸ್ಫೋಟಗೊಂಡು ಕಾರಿನ ಮೇಲೆ ಬಿದ್ದಿದೆ. ಈ ವೇಳೆ ಕಾರು ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ. ಅಥಣಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


TAG


Leave a Reply

Your email address will not be published. Required fields are marked *

error: Content is protected !!