ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಬಿಜೆಪಿ ಮಾಜಿ ಎಂಎಲ್ಸಿ ಮೋಹನ್ ಲಿಂಬಿಕಾಯಿ ಪಕ್ಷಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರಲು ಸಿದ್ಧತೆ ನಡೆಸಿದ್ದಾರೆ. ಈ ಮೂಲಕ ಚುನಾವಣೆ ಹೊಸ್ತಿಲಲ್ಲಿ ಬಿಜೆಪಿಗೆ ಶಾಕ್ ಕೊಟ್ಟಿದ್ದಾರೆ. ಕಾಂಗ್ರೆಸ್ ತತ್ವ ಸಿದ್ಧಾಂತ ಒಪ್ಪಿಕೊಂಡು ಸೇರ್ಪಡೆಯಾಗಲಿದ್ದಾರಂತೆ.
ವಿಧಾನ ಪರಿಷತ್ ಮಾಜಿ ಸದಸ್ಯ ಲಿಂಬಿಕಾಯಿ ಇಂದು ಬೆಂಗಳೂರಿನಲ್ಲಿ ರಾಜೀನಾಮೆ ಸಲ್ಲಿಸಿದ್ದಾರೆ. ಮಾರ್ಚ್ 20ರಂದು ಬೆಳಗಾವಿಗೆ ರಾಹುಲ್ ಗಾಂಧಿ ಆಗಮಿಸಿದ್ದು, ಅಂದು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರಂತೆ. ಒಟ್ಟಿನಲ್ಲಿ ಚುನಾವಣೆ ಸಮೀಪಿಸುತ್ತಿದ್ದಂತೆ ಪಕ್ಷಾಂತರ ಪರ್ವ ಜೋರಾಗಿದೆ.