ಮಾಜಿ ಸ್ಪೀಕರ್ ಪುತ್ರಿಗೆ ಕೊಲೆ ಬೆದರಿಕೆ

400

ಪ್ರಜಾಸ್ತ್ರ ಅಪರಾಧ ಸುದ್ದಿ

ಶಿವಮೊಗ್ಗ: ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರ ಪುತ್ರಿಯ ಕಾರು ಅಡ್ಡಗಟ್ಟಿ ಕೊಲೆ ಬೆದರಿಕೆ ಹಾಕಲಾಗಿದೆ. ಕಾಗೋಡು ತಿಮ್ಮಪ್ಪ ಪುತ್ರಿ ರಾಜನಂದನಿಗೆ ಸಾಗರ ತಾಲೂಕಿನ ದುಷ್ಕರ್ಮಿಯೊಬ್ಬ ಕೊಲೆ ಬೆದರಿಕೆ ಹಾಕಿದ್ದಾನೆ.

ಕಾರು ಚಾಲಕ ಪ್ರಕಾಶ್ ಮೇಲೆ ಹಲ್ಲೆಗೆ ಯತ್ನಿಸಿರುವ ಮಂಜುನಾಥ್ ಎಂಬಾತ ಕೊಲೆ ಬೆದರಿಕೆ ಹಾಕಿದ್ದಾನೆ. ಸಾಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿರುವ ರಾಜನಂದನಿ ವೈದ್ಯಕೀಯ ಶಿಬಿರದಲ್ಲಿ ಭಾಗವಹಿಸಿ ವಾಪಸ್ ಆಗುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




Leave a Reply

Your email address will not be published. Required fields are marked *

error: Content is protected !!