ಪ್ಯಾರಾಮೆಡಿಕಲ್ ಕೋರ್ಸ್ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

160

ಪ್ರಜಾಸ್ತ್ರ ಸುದ್ದಿ

ಕೊಪ್ಪಳ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ನಿರುದ್ಯೋಗಿ ಯುವಕ ಮತ್ತು ಯುವತಿಯರಿಗೆ ಎನ್.ಎ.ಬಿ.ಹೆಚ್ ಪ್ಯಾರಾಮೆಡಿಕಲ್ ಸ್ಕಿಲ್ ಮತ್ತು ನಾನ್ ಪ್ಯಾರಾಮೆಡಿಕಲ್ ಅಲ್ಪಾವಧಿ ಸರ್ಟಿಫಿಕೇಟ್ ಕೋರ್ಸ್ ಗಳಿಗೆ ಅರ್ಜಿ ಸಲ್ಲಿಕೆ ಅವಧಿಯನ್ನು ಡಿಸೆಂಬರ್ 30 ರವರೆಗೆ ವಿಸ್ತರಿಸಲಾಗಿದೆ.

ತರಬೇತಿಯು ಮೂರು ತಿಂಗಳ ಅವಧಿಯಾಗಿದ್ದು, ಪ್ಯಾರಾಮೆಡಿಕಲ್ ಅಸಿಸ್ಟೆಂಟ್ (ನಾನ್ ಪ್ಯಾರಾಮೆಡಿಕಲ್) ಅಭ್ಯರ್ಥಿಗಳು ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಉತ್ತೀರ್ಣರಾಗಿರಬೇಕು. ಪ್ಯಾರಾಮೆಡಿಕಲ್ ಟೆಕ್ನಿಷಿಯನ್ (ಪ್ಯಾರಾಮೆಡಿಕಲ್) ಅಭ್ಯರ್ಥಿಗಳು ಪ್ಯಾರಾಮೆಡಿಕಲ್ ಡಿಪ್ಲೋಮಾ ಕೋರ್ಸ್ ಪೂರ್ಣಗೊಳಿಸಿರಬೇಕು. ಅಭ್ಯರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗೆ ನಿಗದಿತ ನಮೂನೆಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದಿರಬೇಕು. ಅಂಗವಿಕಲ ಅಭ್ಯರ್ಥಿಗಳು ಸಕ್ಷಮ ಪ್ರಾಧಿಕಾರದಿಂದ ಪಡೆದ ವೈದ್ಯಕೀಯ ದೃಢೀಕರಣ ಪತ್ರವನ್ನು ಅರ್ಜಿ ಸಲ್ಲಿಸುವ ಮುಂಚಿತವಾಗಿ ಹೊಂದಿರಬೇಕು.

ವಿದ್ಯಾರ್ಥಿನಿಲಯ, ಕ್ರೈಸ್ ವಿದ್ಯಾರ್ಥಿನಿಲಯ, ಸಫಾಯಿ ಕರ್ಮಚಾರಿ ಮೀಸಲಾತಿ ಅಡಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಪ್ರಮಾಣ ಪತ್ರ ಪಡೆದಿರಬೇಕು. ವಾರ್ಷಿಕ ಆದಾಯ ರೂಪಾಯಿ 5 ಲಕ್ಷ ಮೀರಿರಬಾರದು ಮತ್ತು ವಯೋಮಿತಿ 18 ರಿಂದ 45 ವರ್ಷ ಒಳಗೆ ಇರಬೇಕು.

ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 30 ರೊಳಗಾಗಿ ಅರ್ಜಿ ಸಲ್ಲಿಸಬೇಕು ಮತ್ತು ಹೆಚ್ಚಿನ ಮಾಹಿತಿಗಾಗಿ ಇಲಾಖೆ ವೆಬ್‌ಸೈಟ್   www.sw.kar.nic.inನಲ್ಲಿ ಅಥವಾ ಕೇಂದ್ರ ಕಛೇರಿಯ ದೂರವಾಣಿ ಸಂಖ್ಯೆ: 080-22207784ಗೆ ಹಾಗೂ ಉಪನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಕೊಪ್ಪಳ ಮತ್ತು ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ, ಕೊಪ್ಪಳ, ಯಲಬುರ್ಗಾ, ಗಂಗಾವತಿ, ಕುಷ್ಟಗಿ, ತಾಲೂಕಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಕುಷ್ಟಗಿ ಮತ್ತು ಗಂಗಾವತಿ ಅವರನ್ನು ಸಂಪರ್ಕಿಸಬಹುದು ಎಂದು ಕೊಪ್ಪಳ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಚಿದಾನಂದ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!