ಪ್ರಜಾಸ್ತ್ರ ಅಪರಾಧ ಸುದ್ದಿ
ಶಿವಮೊಗ್ಗ: ನಕಲಿ ಫೇಸ್ ಬುಕ್ ಅಕೌಂಟ್ ವೊಂದರ ಮೂಲಕ ಯುವತಿಯ ಅಶ್ಲೀಲ ಫೋಟೋ ಅಪ್ಲೋಡ್ ಮಾಡಿ ಕಿರುಕುಳ ಕೊಡ್ತಿದ್ದ ವ್ಯಕ್ತಿಯನ್ನ ಬಂಧಿಸಲಾಗಿದೆ. ಸಿಇಎನ್ ಅಪರಾಧ ವಿಭಾಗದ ಪೊಲೀಸರು ವೇಣುಗೋಪಾಲ ಅನ್ನೋ ವ್ಯಕ್ತಿಯನ್ನ ಬಂಧಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆ ಹಿರೇಮಗಳೂರು ಗ್ರಾಮದ ವೇಣುಗೋಪಾಲ, ಯುವತಿ ಹೆಸರಿನಲ್ಲಿ ಫೇಸ್ ಬುಕ್ ಅಕೌಂಟ್ ಕ್ರಿಯೇಟ್ ಮಾಡಿದ್ದಾನೆ. ಅಲ್ಲಿ ಅಶ್ಲೀಲ ಫೋಟೋ ಅಪ್ಲೋಡ್ ಮಾಡ್ತಿರುವ ಸಂಬಂಧ ಯುವತಿಯೊಬ್ಬರು ನೀಡಿದ ದೂರಿನ ಮೇರೆಗೆ ತನಿಖೆ ನಡೆಸಿ ಬಂಧಿಸಿದ್ದಾರೆ. ಬಂಧಿತನದಿಂದ ನಾಲ್ಕು ಮೊಬೈಲ್ ಗಳನ್ನ ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸಿದ್ದಾರೆ.