2ನೇ ದಿನಕ್ಕೆ ಕಾಲಿಟ್ಟ ರೈತರ ಧರಣಿ

256

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರೈತ ವಿರೋಧಿ ತಿದ್ದುಪಡಿ ಕಾಯ್ದೆಗಳನ್ನ ವಿರೋಧಿಸಿ ರೈತ ಪರ ಸಂಘಟನೆಗಳು ನಡೆಸ್ತಿರುವ ಧರಣಿ 2ನೇ ದಿನಕ್ಕೆ ಕಾಲಿಟ್ಟಿದೆ. ನಗರದ ಸೋಮವಾರ ಬೃಹತ್ ಮೆರವಣಿಗೆ ನಡೆಸಿ, ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ಶುರುವಾಗಿದೆ. ಅದು ಇಂದು ಸಹ ಮುಂದುವರೆದಿದೆ.

ಇದರ ಜೊತೆಗೆ ಇಂದು ಜಿಲ್ಲಾ ವ್ಯಾಪ್ತಿಯಲ್ಲಿ ಸಾಂಕೇತಿಕವಾಗಿ ಪ್ರತಿಭಟನೆ ನಡೆಯುವ ಸಾಧ್ಯತೆಯಿದೆ. ಭೂಸುಧಾರಣೆ ಕಾಯ್ದೆ ತಿದ್ದುಪಡಿ, ಎಪಿಎಂಸಿ ಕಾಯ್ದೆ ತಿದ್ದುಪಡಿ, ವಿದ್ಯುತ್ ಕಾಯ್ದೆ ತಿದ್ದುಪಡಿಯನ್ನ ವಿರೋಧಿಸಿ ಸಾವಿರಾರು ಸಂಖ್ಯೆಯಲ್ಲಿ ರೈತರು ಪ್ರತಿಭಟನೆ ನಡೆಸ್ತಿದ್ದಾರೆ. ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕುವ ಮೂಲಕ, ಈ 3 ತಿದ್ದುಪಡಿ ಕಾಯ್ದೆಗಳನ್ನ ವಿರೋಧಿಸಲಾಗ್ತಿದೆ.




Leave a Reply

Your email address will not be published. Required fields are marked *

error: Content is protected !!