ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಮಂಗಳೂರಿನ ಸುರತ್ಕಲ್ ಹತ್ತಿರ ನಡೆದಿರುವ ಫಾಜಿಲ್ ಹತ್ಯೆ ಪೂರ್ವನಿಯೋಜಿತ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಸರ್ಕಾರ ಮೂರು ಹತ್ಯೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿದೆ ಎಂದಿದ್ದಾರೆ.
ಫಾಜಿಲ್ ಕೊಲೆ ಸಂಬಂಧ ಸಧ್ಯ ಯಾವುದೇ ಮಾಹಿತಿ ಸಿಕ್ಕಿಲ್ಲ. ಹಿರಿಯ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆಯುತ್ತಿದ್ದೇನೆ. ನಾವು ತನಿಖೆಯಿಂದ ಹಿಂದೆ ಬಂದಿಲ್ಲ. ಆರೋಪಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.