ಪ್ರಜಾಸ್ತ್ರ ಸಿನಿಮಾ ಡೆಸ್ಕ್
ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ಬಾನ ದಾರಿಯಲ್ಲಿ ಚಿತ್ರದ ಟೀಸರ್ ಪ್ರೇಮಿಗಳ ದಿನವಾದ ಫೆಬ್ರವರಿ 14ರಂದು ರಿಲೀಸ್ ಆಗುತ್ತಿದೆ. ಹಾಡುಗಳ ಮೂಲಕ ಈಗಾಗ್ಲೇ ಸಾಕಷ್ಟು ಕುತೂಹಲ ಮೂಡಿಸಿರುವ ಚಿತ್ರದ ಟೀಸರ್ ನಾಳೆ ಬಿಡುಗಡೆಯಾಗಲಿದೆ.
ನಟ ಗಣೇಶಗೆ ರುಕ್ಮಿಣಿ ವಸಂತ್, ರೇಷ್ಮಾ ನಾಣಯ್ಯ ಜೋಡಿಯಾಗಿ ಕಾಣಿಸಿಕೊಂಡಿದ್ದಾರೆ. ಮತ್ತೊಂದು ರೋಮ್ಯಾಂಟಿಕ್ ಲವ್ ಸ್ಟೋರಿ ತೋರಿಸಲು ನಟ ಗಣೇಶ್ ಹಾಗೂ ನಿರ್ದೇಶಕ ಪ್ರೀತಂ ಗುಬ್ಬಿ ಸಜ್ಜಾಗಿದ್ದಾರೆ. ಅರ್ಜುನ್ ಜನ್ಯ ಸಂಗೀತವಿದೆ. ಶ್ರೀ ವಾರ ಟಾಕೀಸ್ ಬ್ಯಾನರ್ ಅಡಿಯಲ್ಲಿ ಬಾನ ದಾರಿಯಲ್ಲಿ ಚಿತ್ರ ನಿರ್ಮಾಣವಾಗುತ್ತಿದೆ.