ಪ್ರಜಾಸ್ತ್ರ ಸಿನಿಮಾ ಡೆಸ್ಕ್
ಸಿನಿಮಾ ನಿರ್ದೇಶಕ ಮಂಸೋರೆ(ಮಂಜುನಾಥ್ ಸೋಮಕೇಶವ್ ರೆಡ್ಡಿ) ವಿರುದ್ಧ ಪತ್ನಿ ಅಖಿಲಾ, ವರದಕ್ಷಿಣೆ, ಕೊಲೆ ಬೆದರಿಕೆ ಆರೋಪ ಮಾಡಿದ್ದು, ಸುಬ್ರಹ್ಮಣ್ಯಪುರ ಠಾಣೆಗೆ ದೂರು ಸಲ್ಲಿಸಿದ್ದಾರೆ.
ಪತಿ ಮಂಜುನಾಥ, ಅತ್ತೆ ವೆಂಕಟಲಕ್ಷ್ಮಮ್ಮ, ಪತಿಯ ಅಕ್ಕ ಹೇಮಲತಾ ವಿರುದ್ಧ ದೂರು ನೀಡಿದ್ದಾರೆ. ಕೋವಿಡ್ ಸಂದರ್ಭದಲ್ಲಿ ಸಿನಿಮಾಗಾಗಿ 10 ಲಕ್ಷ ರೂಪಾಯಿ ನನ್ನ ಕುಟುಂಬಸ್ಥರು ನೀಡಿದ್ದರು. ಈಗ 30 ಲಕ್ಷ ಮೌಲ್ಯದ ಕಾರು ಕೊಡಿಸುವಂತೆ ಕಿರುಕುಳ ನೀಡುತ್ತಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಇತ್ತ ಪತಿ ಸಹ ಪ್ರತಿ ದೂರು ಸಲ್ಲಿಸಿದ್ದಾರೆ. ನನ್ನ ತಾಯಿ ಮೇಲೆ ಹಲ್ಲೆ ಮಾಡಿದ್ದಾರೆ. ಮನೆಯಿಂದ ಅವರನ್ನು ಹೊರ ಹಾಕು ಎನ್ನುತ್ತಿದ್ದಾರೆ. ಆಕೆ ಮಾನಸಿಕ ಅಸ್ವಸ್ಥೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಕೆ ಮನೆಯವರಿಂದ ಯಾವುದೇ ಹಣ ಪಡೆದಿಲ್ಲ. ಎಲ್ಲ ರೀತಿಯ ತನಿಖೆಗೆ ಸಿದ್ಧ ಎಂದಿದ್ದಾರೆ.