ನಿರ್ಮಲಾ ಸೀತಾರಾಮನ್ ಆಸ್ಪತ್ರೆಗೆ ದಾಖಲು

289

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಏಮ್ಸ್ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

63 ವರ್ಷದ ನಿರ್ಮಲಾ ಸೀತಾರಾಮನ್ ಅವರಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಜೊತೆಗೆ ಜ್ವರ ಇದೆ ಎಂದು ತಿಳಿದು ಬಂದಿದೆ. ಸಧ್ಯ ಅವರ ಆರೋಗ್ಯ ಸ್ಥಿರವಾಗಿದೆಯಂತೆ. ಶನಿವಾರ ಚೆನ್ನೈನಲ್ಲಿರುವ ಡಾ.ಎಂಜಿಆರ್ ವೈದ್ಯಕೀಯ ವಿಶ್ವವಿದ್ಯಾಲಯದ 35ನೇ ಘಟಿಕೋತ್ಸವದಲ್ಲಿ ಭಾಗವಹಿಸಿದ್ದರು. ಭಾನುವಾರ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.




Leave a Reply

Your email address will not be published. Required fields are marked *

error: Content is protected !!