ಆರ್ಥಿಕ ಪ್ಯಾಕೇಜ್: ಜನರಿಗೆ ನೇರವಾಗಿ ಹಣ ತಲುಪುವಂತೆ ಮಾಡಿ

478

ನವದೆಹಲಿ: ಕೇಂದ್ರ ಸರ್ಕಾರ ಕರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ 20 ಲಕ್ಷ ಕೋಟಿ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಿದೆ. ಈ ಬಗ್ಗೆ ಪ್ರಧಾನಿ ಮೋದಿ ಮರು ಪರಿಶೀಲನೆ ಮಾಡಬೇಕು. ಜನರಿಗೆ ನೇರವಾಗಿ ಹಣ ವರ್ಗಾವಣೆಯಾಗಬೇಕು ಎಂದು ಸಂಸದ ರಾಹುಲ ಗಾಂಧಿ ಹೇಳಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತ್ನಾಡಿದ ಅವರು, ದೇಶದಲ್ಲಿಂದು ಹಣದ ಅವಶ್ಯಕತೆ ತುಂಬಾಯಿದೆ. ಮಕ್ಕಳು ಕಷ್ಟದಲ್ಲಿದ್ದಾಗ ತಾಯಿ ಸಾಲ ಕೊಡುವುದಿಲ್ಲ. ಸಹಾಯ ಮಾಡ್ತಾಳೆ. ಹಾಗೇ ಕೇಂದ್ರ ಸರ್ಕಾರ ಜನರಿಗೆ ಸಹಾಯ ಮಾಡಬೇಕಿದೆ. ಘೋಷಣೆ ಮಾಡಿರುವ ಹಣ ಜನರಿಗೆ ನೇರವಾಗಿ ತಲುಪುವ ವ್ಯವಸ್ಥೆ ಮಾಡಿ ಎಂದಿದ್ದಾರೆ.

ಈಗಾಗ್ಲೇ ದೇಶದಲ್ಲಿ 85 ಸಾವಿರಕ್ಕೂ ಅಧಿಕ ಮಂದಿಗೆ ಸೋಂಕು ತಗುಲಿದೆ. 2700 ಜನ ಬಲಿಯಾಗಿದ್ದಾರೆ. ವಲಸೆ ಕಾರ್ಮಿಕರು, ದಿನಗೂಲಿ ಕೆಲಸಗಾರರು, ಸಣ್ಣಪುಟ್ಟ ಅಂಗಡಿಕಾರರು ಸೇರಿದಂತೆ ಲಕ್ಷಾಂತರ ಜನರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಜನರ ಖಾತೆಗಳಿಗೆ ಹಣ ವರ್ಗಾವಣೆ ಮಾಡಿದ್ರೆ ಒಳ್ಳೆಯದು. ನನ್ನ ಸಲಹೆಯನ್ನ ಕೇಂದ್ರ ಸರ್ಕಾರ ಗಂಭೀರವಾಗಿ ತೆಗೆದುಕೊಳ್ಳುತ್ತೆ ಅನ್ನೋ ವಿಶ್ವಾಸವಿದೆ ಎಂದಿದ್ದಾರೆ.




Leave a Reply

Your email address will not be published. Required fields are marked *

error: Content is protected !!