ಕಾಣೆಯಾಗಿದ್ದ ಶಿಕ್ಷಕನ ಶವ ಪತ್ತೆ

495

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಜೀವನದಲ್ಲಿ ಜಿಗುಪ್ಸೆಯಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆಂದು ಡೆತ್ ನೋಟ್ ಬರೆದಿಟ್ಟು ಕಾಣೆಯಾಗಿದ್ದ ಶಿಕ್ಷಕನ ಶವ ಪತ್ತೆಯಾಗಿದೆ. ಜಿಲ್ಲೆಯ ಬಬಲೇಶ್ವರ ತಾಲೂಕಿನ ಬೆಳ್ಳುಬ್ಬಿ ಗ್ರಾಮದಲ್ಲಿ ಶವ ಪತ್ತೆಯಾಗಿದೆ.

ಶಿಕ್ಷಕ ಬಾಳಪ್ಪ ದಳವಾಯಿ ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕನಾಗಿದ್ದಾನೆ. ನನ್ನ ಸಾವಿಗೆ ನಾನೇ ಕಾರಣ. ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಡೆತ್ ನೋಟ್ ನಲ್ಲಿ ಬಾಳಪ್ಪ ಬರೆದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಕುರಿತು ಕೊಲ್ಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




Leave a Reply

Your email address will not be published. Required fields are marked *

error: Content is protected !!