ಮಾಜಿ ಸಚಿವ ಡಿ.ಬಿ ಚಂದ್ರೇಗೌಡ ನಿಧನ

107

ಪ್ರಜಾಸ್ತ್ರ ಸುದ್ದಿ

ಚಿಕ್ಕಮಗಳೂರು: ಮಾಜಿ ಸಚಿವ, ವಿಧಾನಸಭೆ ಮಾಜಿ ಸ್ಪೀಕರ್ ಡಿ.ಬಿ ಚಂದ್ರೇಗೌಡ(87) ಅವರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದಾರದಹಳ್ಳಿಯಲ್ಲಿರುವ ನಿವಾಸದಲ್ಲಿ ಇಂದು ಮುಂಜಾನೆ ನಿಧನರಾಗಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು, ಬೆಂಗಳೂರಿನಿಂದ ಸ್ವಗ್ರಾಮಕ್ಕೆ ತೆರಳಿದ್ದರು. ಅಡ್ಯಂತಾಯ ರಂಗಮಂದಿರದಲ್ಲಿ ಮಧ್ಯಾಹ್ನ 2 ಗಂಟೆಯಿಂದ ಸಂಜೆ 6 ಗಂಟೆಯ ತನಕ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಡಿ.ಬಿ ಚಂದ್ರೇಗೌಡ ನಿಧನಕ್ಕೆ ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂಗಳಾದ ಯಡಿಯೂರಪ್ಪ, ಕುಮಾರಸ್ವಾಮಿ ಸೇರಿದಂತೆ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!