ಬಿಜೆಪಿ ಸಂಸದನ ಪುತ್ರನ ವಿರುದ್ಧ ಎಫ್ಐಆರ್

158

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಬಳ್ಳಾರಿಯ ಬಿಜೆಪಿ ಸಂಸದ ದೇವೇಂದ್ರಪ್ಪನವರ ಪುತ್ರನ ವಿರುದ್ಧ ಯುವತಿಗೆ ಮೋಸ ಮಾಡಿದ ಆರೋಪ ಕೇಳಿ ಬಂದಿದೆ. ಮದುವೆಯಾಗುವುದಾಗಿ ಹೇಳಿ ದೈಹಿಕ ಸಂಪರ್ಕ ಬೆಳಸಿ ಮೋಸ ಮಾಡಿದ್ದಾರೆ ಎಂದು ಯುವತಿ ದೂರು ದಾಖಲಿಸಿದ್ದಾಳೆ.

ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಉಪನ್ಯಾಸಕನಾಗಿರುವ ರಂಗನಾಥ್ ವಿರುದ್ಧ ಬೆಂಗಳೂರು ಮೂಲದ ಯುವತಿ ನಗರದ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಎಫ್ಐಆರ್ ದಾಖಲಾಗಿದೆ.

ಒಂದೂವರೆ ವರ್ಷದ ಹಿಂದೆ ಯುವತಿಯ ಪರಿಚಯವಾಗಿದೆ. ನಂತರ ಸ್ನೇಹ ಬೆಳದಿದೆ. ಮದುವೆಯಾಗುವುದಾಗಿ ಹೇಳಿ ದೈಹಿಕ ಸಂಪರ್ಕ ಬೆಳಸಿದ್ದಾರೆ. ಈಗ ಮದುವೆಯಾಗಲು ಹಿಂದೇಟು ಹಾಕುತ್ತಿದ್ದಾರೆ ಎಂದು ಯುವತಿ ದೂರಿನಲ್ಲಿ ಆರೋಪಿಸಿದ್ದಾಳೆ. ಈ ಸಂಬಂಧ ಇಬ್ಬರಿಗೂ ಪೊಲೀಸರು ನೋಟಿಸ್ ಕಳಿಸಿದ್ದಾರೆ.

ಇತ್ತ ರಂಗನಾಥ್ ಮೈಸೂರಿನ ವಿಜಯನಗರ ಠಾಣೆಯಲ್ಲಿ ಯುವತಿ ವಿರುದ್ಧ ಪ್ರತಿ ದೂರು ದಾಖಲಿಸಿದ್ದಾರೆ. ನನ್ನ ಖಾಸಗಿ ಫೋಟೋಗಳನ್ನು ಇಟ್ಟುಕೊಂಡು 15 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದು, ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾಳೆ ಎಂದು ಆರೋಪಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!