ಚಿಕ್ಕಬಳ್ಳಾಪುರದಲ್ಲಿ 4.8 ಕೋಟಿ ವಶ, ಬಿಜೆಪಿ ಅಭ್ಯರ್ಥಿ ವಿರುದ್ಧ ಎಫ್ಐಆರ್

73

ಪ್ರಜಾಸ್ತ್ರ ಸುದ್ದಿ

ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣೆಯ ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಸುಧಾಕರ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸುಧಾಕರ್ ಆಪ್ತನ ಮನೆಯಲ್ಲಿ 4.8 ಕೋಟಿ ರೂಪಾಯಿ ಪತ್ತೆಯಾಗಿದೆ. ಈ ಕುರಿತು ಚುನಾವಣಾ ಆಯೋಗ ದೂರು ದಾಖಲಿಸಿದೆ.

ಫ್ಲೈಯಿಂಗ್ ಸ್ಕ್ವಾಡ್ ತಂಡ ಹಣವನ್ನು ವಶ ಪಡಿಸಿಕೊಂಡಿದೆ. ಹೀಗಾಗಿ ಏಪ್ರಿಲ್ 25ರಂದು ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಶುಕ್ರವಾರ ತಿಳಿಸಿದ್ದಾರೆ.

ಮತದಾರರಿಗೆ ಆಮಿಷ ಹಾಗೂ ಅನಗತ್ಯ ಪ್ರಭಾವ ಬೀರುವ ಆರೋಪದ ಸಂಬಂಧ ಜನತಾ ಪ್ರಾತಿನಿಧ್ಯ ಕಾಯ್ದೆ ಹಾಗೂ ಐಪಿಸಿಯ ಕಾಯ್ದೆಗಳ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!