ಸಿ.ಟಿ ರವಿ ವಿರುದ್ಧ ಎಫ್ಐಆರ್

78

ಪ್ರಜಾಸ್ತ್ರ ಸುದ್ದಿ

ಚಿಕ್ಕಮಗಳೂರು: ಬಿಜೆಪಿ ಮಾಜಿ ಸಚಿವ ಸಿ.ಟಿ ರವಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ದ್ಷೇಷದ ಹೇಳಿಕೆಯ ಪೋಸ್ಟ್ ಮಾಡಿದ್ದಾರೆ ಎಂದು ಎನ್ನುವ ಆರೋಪದ ಮೇಲೆ ಎಫ್ಐಆರ್ ದಾಖಲಿಸಲಾಗಿದೆ.

ಚುನಾವಣೆ ಆಯೋಗದ ಸಾಮಾಜಿಕ ಜಾಲತಣಾ ಮೇಲ್ಚಿಚಾರಣ ಸಮಿತಿ ಅಧಿಕಾರಿಯ ಸೂಚನೆ ಮೇರೆಗೆ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾಗರಗಳ ಆಳವನ್ನು ಅಳೆಯಬಹುದು. ಹಿಂದೂ ಮತ್ತು ಹಿಂದೂ ಧರ್ಮದ ವಿರುದ್ಧ ರಾಹುಲ್ ಗಾಂಧಿ ದ್ವೇಷವನ್ನು ಎಂದಿಗೂ ಕಂಡು ಹಿಡಿಯಲಾಗುವುದಿಲ್ಲ. ಹಿಂದೂ ಧರ್ಮದಲ್ಲಿ ಶಕ್ತಿ ಎನ್ನುವ ಪದವಿದೆ. ನಮ್ಮ ಹೋರಾಟ ಶಕ್ತಿ ವಿರುದ್ಧ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ದುಷ್ಟ ಶಕ್ತಿಗಳ ದಾಳಿಯಿಂದ ನಮ್ಮ ಧರ್ಮವನ್ನು ರಕ್ಷಿಸಲು ಹಿಂದುಗಳು ಚುನಾವಣೆಯಲ್ಲಿ ಕಾಂಗ್ರೆಸ್ ಅನ್ನು ನಿರ್ದಯವಾಗಿ ತೆಗೆದು ಹಾಕಬೇಕು ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಸಿ.ಟಿ ರವಿ ಬರೆದಿದ್ದಾರೆ.




Leave a Reply

Your email address will not be published. Required fields are marked *

error: Content is protected !!