ಮಾಜಿ ಸಿಎಂ ವಿರುದ್ಧ ಪೋಕ್ಸೋ ಪ್ರಕರಣ

119

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ಬಿ.ಎಸ್ ಯಡಿಯೂರಪ್ಪ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣದಡಿಯಲ್ಲಿ ಕೇಸ್ ದಾಖಲಾಗಿದೆ. 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಲಾಗಿದೆ ಎಂದು ಪೋಕ್ಸೋ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಬಾಲಕಿಯ ತಾಯಿ ಗುರುವಾರ ರಾತ್ರಿ ಸದಾಶಿವ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಫೆಬ್ರವರಿ 2ರಂದು ಸಹಾಯ ಕೇಳಲು ಹೋದ ಮಗಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂದು ದೂರಿನಲ್ಲಿ ದಾಖಲಿಸಿದ್ದಾರೆ.

ಮಗಳ ಮೇಲೆ ಅತ್ಯಾಚಾರವಾಗಿತ್ತು. ಪ್ರಕರಣದ ತನಿಖೆಗೆ ಎಸ್ಐಟಿ ರಚಿಸುವಂತೆ ಸರ್ಕಾರದ ಮೇಲೆ ಒತ್ತಡ ಹಾಕುವಂತೆ ಸಹಾಯ ಕೇಳಲು ಯಡಿಯೂರಪ್ಪ ಬಳಿ ಹೋದಾಗ ಲೈಂಗಿಕ ದೌರ್ಜನ್ಯವೆಸಗಿದ್ದಾರೆ. ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದರಿಂದ ಠಾಣೆಗೆ ಬಂದು ಮಾಹಿತಿ ನೀಡಲು ತಡವಾಗಿದೆ ಎಂದು ತಿಳಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!