ಶಾಸಕ ರೇಣುಕಾಚಾರ್ಯ ವಿರುದ್ಧ ಎಫ್ಐಆರ್

161

ಪ್ರಜಾಸ್ತ್ರ ಸುದ್ದಿ

ದಾವಣಗೆರೆ: ಸರ್ಕಾರಿ ನೌಕರರಿಗೆ ಕೆಲಸ ಮಾಡಲು ಅಡ್ಡಿಪಡಿಸಿದ ಆರೋಪದ ಮೇಲೆ ಹೊನ್ನಳ್ಳಿ ಬಿಜೆಪಿ ಶಾಸಕ ಎಂ.ಪಿ ರೇಣುಕಾಚಾರ್ಯ ವಿರುದ್ಧ ಎಫ್ಐಆರ್ ದಾಖಲಾಗಿದೆ. ಜಿಲ್ಲೆಯ ನ್ಯಾಮತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ಕೆಲ ದಿನಗಳ ಹಿಂದೆ ಶಾಸಕ ರೇಣುಕಾಚಾರ್ಯ ಅವರ ಸಹೋದರನ ಮಗ ಚಂದ್ರು ನಾಪತ್ತೆಯಾಗಿದೆ ನಂತರ ಕಾಲುವೆಯಲ್ಲಿ ಶವವಾಗಿ ಪತ್ತೆಯಾಗಿದ್ದ. ಈ ಬಗ್ಗೆ ತನಿಖೆ ನಡೆಸುವಂತೆ ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ ಬಳಿ ಮನವಿ ಮಾಡಿದ್ದರು. ಇದರ ನಡುವೆ ಸರ್ಕಾರಿ ನೌಕರರಿಗೆ ಕೆಲಸ ಮಾಡಲು ಅಡ್ಡಿಪಡಿಸಿದ ಆರೋಪದ ಮೇಲೆ ಎಫ್ಐಆರ್ ದಾಖಲಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!