ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಎಫ್ಐಆರ್

171

ಪ್ರಜಾಸ್ತ್ರ ಸುದ್ದಿ

ಮೈಸೂರು: ಆರ್ ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಜಿಲ್ಲೆಯ ಶ್ರೀರಂಗಪಟ್ಟ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಜೆಡಿಎಸ್ ನ ನಜ್ಮಾ ನಝೀರ್ ಚಿಕ್ಕನೇರಳೆ ಎಂಬುವವರು ದೂರು ನೀಡಿದ್ದು, ಅದನ್ನು ಆಧರಿಸಿ ಎಫ್ಐಆರ್ ದಾಖಲಾಗಿದೆ.

ಮುಸ್ಲಿಂ ಮಹಿಳೆಯರ ವಿರುದ್ಧ ಪ್ರಭಾಕರ ಭಟ್ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಧರ್ಮಗಳ ನಡುವೆ ಗಲಭೆ ಸೃಷ್ಟಿಸುವ ರೀತಿಯಲ್ಲಿ ಮಾತನಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಹಿಂದೂ ಜಾಗರಣ ವೇದಿಕೆ ವತಿಯಿಂದ ಕಳೆದ ಭಾನುವಾರ ಶ್ರೀರಂಗಪಟ್ಟಣದಲ್ಲಿ ಸಂಕೀರ್ತನಾ ಯಾತ್ರೆ ಆಯೋಜಿಸಲಾಗಿತ್ತು. ಈ ವೇಳೆ ಪ್ರಚೋದನಕಾರಿ ಭಾಷಣ ಮಾಡಿರುವ ಆರೋಪದ ಮೇಲೆ ದೂರು ದಾಖಲಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!