ಕುಂದಾನಗರಿಯಲ್ಲಿ ಹೊತ್ತಿ ಉರಿದ ಸಾರಿಗೆ ಬಸ್

176

ಪ್ರಜಾಸ್ತ್ರ ಸುದ್ದಿ

ಬೆಳಗಾವಿ: ಹತ್ತರಕಿ ಟೋಲ್ ಹತ್ತಿರ ಕೆಎಸ್ಆರ್ ಟಿಸಿ ಬಸ್ಸೊಂದು ಏಕಾಏಕಿ ಹೊತ್ತಿ ಉರಿದಿದೆ. ಅದೃಷ್ಟವಶಾತ್ ಚಾಲಕನ ಸಮಯ ಪ್ರಜ್ಞೆಯಿಂದ ಯಾವುದೇ ಅನಾಹುತವಾಗಿಲ್ಲ. ಸಂಕೇಶ್ವರ ಡಿಪೋಗೆ ಸೇರಿದ ಬಸ್ ಬೆಳಗಾವಿಗೆ ಬರುತ್ತಿದ್ದಾಗ ಈ ಅವಘಡ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಬಸ್ ಸಂಚರಿಸುತ್ತಿದ್ದಾಗ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಡ್ರೈವರ್ ಹಾಗೂ ಕಂಡಕ್ಟರ್ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಕೆಳಗೆ ಇಳಿಸಿದ್ದಾರೆ. ನೋಡು ನೋಡುತ್ತಿದ್ದಂತೆ ಬೆಂಕಿ ಇಡೀ ಬಸ್ ಆವರಿಸಿಕೊಂಡಿತು. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದರು. ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




Leave a Reply

Your email address will not be published. Required fields are marked *

error: Content is protected !!