ವಿಜಯಪುರ ಜಿಲ್ಲಾಸ್ಪತ್ರೆಯಲ್ಲಿ ಬೆಂಕಿ ಅನಾಹುತ

191

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಗುಮ್ಮಟನಗರಿಯಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಶುಕ್ರವಾರ ಬೆಂಕಿ ಅನಾಹುತ ಸಂಭವಿಸಿದೆ. ರೂಮುವೊಂದರಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ ಇದರಿಂದಾಗಿ ಹಳೆ ದಾಖಲೆಗಳು ಬೆಂಕಿಗೆ ಆಹುತಿಯಾಗಿವೆ.

ಘಟನೆ ಬಗ್ಗೆ ತಿಳಿದ ಬಳಿಕ ಅಗ್ನಿಶಾಮಕ ಸಿಬ್ಬಂದಿ ಬಂದು ಬೆಂಕಿ ನಂದಿಸುವ ಕೆಲಸ ಮಾಡಿದರು. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಸಾವು, ನೋವು ಸಂಭವಿಸಿಲ್ಲ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡರಬಹುದು ಎನ್ನಲಾಗುತ್ತಿದೆ. ತನಿಖೆ ಬಳಿಕ ನಿಖರ ಕಾರಣ ತಿಳಿದು ಬರಲಿದೆ.




Leave a Reply

Your email address will not be published. Required fields are marked *

error: Content is protected !!