ಬೆಂಕಿ ಅವಗಡ: ಹೊತ್ತಿ ಉರಿದ ಮನೆ

224

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಜಿಲ್ಲೆಯ ಇಂಡಿ ತಾಲೂಕಿನ ಚಿಕ್ಕಬೆವನೂರು ಗ್ರಾಮದಲ್ಲಿ ಆಕಸ್ಮಿಕ ಬೆಂಕಿ ಅನಾಹುತದಿಂದಾಗಿ ಮನೆಯೊಂದು ಹೊತ್ತಿ ಉರಿದ ಘಟನೆ ನಡೆದಿದೆ. ಕಾಂತಪ್ಪ ಮೇಲಿನಮನೆ ಎಂಬುವರ ಮನೆ ಸುಟ್ಟು ಹೋಗಿದೆ.

ಬೆಂಕಿ ಅವಗಡದಿಂದಾಗಿ ಮನೆಯಲ್ಲಿದ್ದ ಹಣ, ಚಿನ್ನಾಭರಣ ಸೇರಿದಂತೆ ಸುಮಾರು 5 ಲಕ್ಷ ಮೌಲ್ಯದ ವಸ್ತುಗಳು ಸುಟ್ಟು ಹೋಗಿವೆ ಎಂದು ಹೇಳಲಾಗುತ್ತಿದೆ. ವಿಷಯ ತಿಳಿದು ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದರು. ಇಂಡಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅನಾಹುತ ನಡೆದಿದೆ.




Leave a Reply

Your email address will not be published. Required fields are marked *

error: Content is protected !!