ದಸರಾ ವಸ್ತುಪ್ರದರ್ಶನ ಪ್ರಾಧಿಕಾರದ ಕಟ್ಟಡಕ್ಕೆ ಬೆಂಕಿ

254

ಪ್ರಜಾಸ್ತ್ರ ಸುದ್ದಿ

ಮೈಸೂರು: ಇಲ್ಲಿನ ದಸರಾ ವಸ್ತುಪ್ರದರ್ಶನ ಪ್ರಾಧಿಕಾರ ಕಚೇರಿ ಕಟ್ಟಡದಲ್ಲಿ ಗುರುವಾರ ಮುಂಜಾನೆ ಬೆಂಕಿ ಕಾಣಿಸಿಕೊಂಡಿದೆ. ಇದರಿಂದಾಗಿ ಪೀಠೋಪಕರಣಗಳು ಸೇರಿ ಅನೇಕ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಅಲ್ಲದೆ ಪಕ್ಕದಲ್ಲಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಟ್ಟಡಕ್ಕೂ ಬೆಂಕಿ ವ್ಯಾಪಿಸಿದೆ.

ವಿಷಯ ತಿಳಿದು ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಅನಾಹುತದಲ್ಲಿ ಯಾವುದೇ ಪ್ರಾಣಹಾನಿ ಆಗಿಲ್ಲ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡಿದೆ ಎಂದು ಶಂಕಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!