ಅಪರಿಚಿತ ವ್ಯಕ್ತಿ ಸಜೀವ ದಹನ

462

ಪ್ರಜಾಸ್ತ್ರ ಸುದ್ದಿ

ಸಿಂದಗಿ: ಅಪರಿಚಿತ ವ್ಯಕ್ತಿಯೊಬ್ಬ ಸಜೀವ ದಹನವಾದ ಘಟನೆ ತಾಲೂಕಿನ ಕಕ್ಕಳಮೇಲಿ ಗ್ರಾಮದಲ್ಲಿ ನಡೆದಿದೆ. ಅಂದಾಜು 37 ವರ್ಷದ ವ್ಯಕ್ತಿ ಸಜೀವ ದಹನವಾಗಿದ್ದಾನೆ. ಆತನ ಗುರುತು ಪತ್ತೆ ಕಾರ್ಯ ನಡೆಯುತ್ತಿದೆ.

ಸಂಗ್ರಹಿಸಿಟ್ಟಿದ ಹುಲ್ಲಿನ ಗುಂಪಿಗೆ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಬೆಂಕಿ ಅವಘಡ ಸಂಭವಿಸಿದ ಪರಿಣಾಮ, ಈ ಅನಾಹುತ ನಡೆದಿರಬಹುದು ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಬಂದು ಬೆಂಕಿ ನಂದಿಸಿದರು. ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಘಟನೆ ಹೇಗೆ ನಡೆದಿದೆ ಅನ್ನೋ ಸತ್ಯಾಸತ್ಯತೆ ತಿಳಿದು ಬರಬೇಕಿದೆ.




Leave a Reply

Your email address will not be published. Required fields are marked *

error: Content is protected !!