ಆಸ್ಪತ್ರೆಯಲ್ಲಿ ಬೆಂಕಿ ಅನಾಹುತ: 10 ನವಜಾತ ಶಿಶುಗಳ ಮಾರಣಹೋಮ

309

ಪ್ರಜಾಸ್ತ್ರ ಸುದ್ದಿ

ಭಂಡಾರಾ: ಜಿಲ್ಲಾಸ್ಪತ್ರೆಯ ಮಕ್ಕಳ ಘಟಕದಲ್ಲಿ ಬೆಂಕಿ ಅನಾಹುತ ಸಂಭವಿಸಿದ ಪರಿಣಾಮ 10 ನವಜಾತ ಶಿಶುಗಳು ಸಾವನ್ನಪ್ಪಿರುವ ಮನಕಲಕುವ ಘಟನೆ ನಡೆದಿದೆ. ಮಧ್ಯರಾತ್ರಿ ಸುಮಾರು 2ಗಂಟೆಯ ಸಮಯದಲ್ಲಿ ಈ ಅನಾಹುತ ಸಂಭವಿಸಿದೆ ಎಂದು ಹೇಳಲಾಗ್ತಿದೆ.

ಮಹಾರಾಷ್ಟ್ರದ ಭಂಡಾರಾ ಜಿಲ್ಲಾಸ್ಪತ್ರೆಯಲ್ಲಿನ ಮಕ್ಕಳ ಘಟಕದಲ್ಲಿ 17 ಮಕ್ಕಳು ದಾಖಲಾಗಿದ್ರು. ರಾತ್ರಿ 2 ಗಂಟೆ ಸುಮಾರಿಗೆ ದಟ್ಟ ಹೊಗೆ ಕಾಣಿಸಿಕೊಂಡಿದೆ. ವದ್ಯರು, ಸಿಬ್ಬಂದಿ ಮಕ್ಕಳನ್ನ ರಕ್ಷಿಸಲು ಪ್ರಯತ್ನಿಸಿದ್ರೂ 10 ನವಜಾತ ಶಿಶುಗಳು ಮೃತಪಟ್ಟಿದ್ದು 7 ಶಿಶುಗಳ ರಕ್ಷಣೆ ಮಾಡಲಾಗಿದೆ. ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಸಂದೀಪ ಕದಮ್ ಹೇಳಿದ್ದಾರೆ.




Leave a Reply

Your email address will not be published. Required fields are marked *

error: Content is protected !!