ರಾಷ್ಟ್ರ ರಾಜಧಾನಿಯಲ್ಲಿ ಮತ್ತೊಂದು ಬೆಂಕಿ ದುರಂತ

334

ನವದೆಹಲಿ: ಇಂದು ಬೆಳ್ಳಂಬೆಳಗ್ಗೆ ನಗರದ ನರೇಲಾ ಕೈಗಾರಿಕಾ ಪ್ರದೇಶದಲ್ಲಿ ಬೆಂಕಿ ದುರಂತ ಸಂಭವಿಸಿದೆ. ಅಪಾರ ಪ್ರಮಾಣದ ಬೆಂಕಿಯಿಂದಾಗಿ ಸ್ಥಳೀಯರು ಕಂಗಾಲಾಗಿದ್ರು. ತಕ್ಷಣವೇ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ಶುರು ಮಾಡಿದ್ರು.

ಎರಡು ಶೂ ಫ್ಯಾಕ್ಟರಿಯಲ್ಲಿ ಬೆಂಕಿ ಅವಗಡ ಸಂಭವಿಸಿದ್ದು ಹಲವರಿಗೆ ಗಾಯಗಳಾಗಿವೆ. ಒಂದು ಕಾರ್ಖಾನೆಯಲ್ಲಿನ ಬೆಂಕಿಯನ್ನ ನಂದಿಸಲಾಗಿದ್ದು, ಇನ್ನೊಂದರಲ್ಲಿನ ಬೆಂಕಿ ನಂದಿಸುವ ಕಾರ್ಯ ಭರದಿಂದ ಸಾಗಿದೆ. ಸಿಲಿಂಡರ್ ಸ್ಫೋಟದಿಂದ ಅನಾಹುತ ಸಂಭವಿಸಿದೆ ಅಂತಾ ಹೇಳಲಾಗ್ತಿದ್ದು, ಫ್ಯಾಕ್ಟರಿ ಒಳಗೆ ಯಾರಾದ್ರೂ ಸಿಲುಕಿರುವ ಬಗ್ಗೆ ಸ್ಪಷ್ಟ ಮಾಹಿತಿ ಬಂದಿಲ್ಲ.




Leave a Reply

Your email address will not be published. Required fields are marked *

error: Content is protected !!