ಬೆಳ್ಳಂಬೆಳಗ್ಗೆ ತಿಕೋಟಾದಲ್ಲಿ ಬೆಂಕಿ ಅನಾಹುತ

276

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಶನಿವಾರ ಬೆಳ್ಳಂಬೆಳ್ಳಗ್ಗೆ ಬೇಕರಿ ಹಾಗೂ ಪೈಪ್ ಅಂಗಡಿಗಳಲ್ಲಿ ಆಕಸ್ಮಿಕ ಬೆಂಕಿ ಅನಾಹುತ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಅನಾಹುತ ನಡೆದಿದೆ ಎನ್ನಲಾಗ್ತಿದೆ.

ವಿಜಯಪುರ ಜಿಲ್ಲೆಯ ತಿಕೋಟಾ ಪಟ್ಟಣದ ಅಂಬೇಡ್ಕರ್ ಸರ್ಕಲ್ ಬಳಿಯಿರುವ ಅಂಗಡಿಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದರ ಪರಿಣಾಮ ಅಂಗಡಿಗಳು ಸುಟ್ಟು ಕರಕಲಾಗಿವೆ. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕೆಲಸ ಮಾಡಿದರು.

ಬೆಂಕಿ ಅವಗಡದಿಂದ ಅಂಗಡಿಯಲ್ಲಿನ ವಸ್ತುಗಳು ಸಂಪೂರ್ಣವಾಗಿ ಸುಟ್ಟು ಹೋಗಿವೆ. ತಿಕೋಟಾ ಪೊಲೀಸ ಠಾಣೆ ವ್ಯಾಪ್ತಿಯಲ್ಲಿ ಶನಿವಾರ ಬೆಳಗ್ಗೆ ಈ ಘಟನೆ ನಡೆದಿದೆ.




Leave a Reply

Your email address will not be published. Required fields are marked *

error: Content is protected !!